ವಿಜಯಪುರ: ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಬೃಹತ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಸಚೀನ ಕುಳಗೇರಿ, ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ. ಕೆಲವೊಂದು ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ, ತರಗತಿಗಳು ಸರಿಯಾಗಿ ನಡೆಯದೆ ವಿಧ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದ ಮಧ್ಯೆ ಮೂಡುತ್ಜಿದೆ ಎಂದು ಹೇಳದರು.
ರಾಜ್ಯ ಸರಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನವನ್ನು ನೀಡಬೇಕು. ತಕ್ಷಣವೇ ಪರಿಹಾರವನ್ನು ನೀಡಿ ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ. ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ. ಮಹಾನಗರ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ, ನಗರ ಕಾರ್ಯದರ್ಶಿ ಕವಿತಾ ಬಿರಾದಾರ, ಪ್ರಾಂತ ಕಾರ್ಯಕಾರಿಣಿ ಸದಸ್ಯ ಶಿವನಗೌಡ ಬಿರಾದಾರ ಪ್ರವೀಣ ಬಿರಾದಾರ, ವಿದ್ಯಾರ್ಥಿ ಕಾರ್ಯಕರ್ತರಾದ ಸಿದ್ದು ಪತ್ತಾರ, ಅಕ್ಷಯ ಯಾದವಾಡ, ಶ್ರವಣ,ಅಮಿತ,ಮಹೇಶ, ಬಬ್ಲೂ, ಮಹಾದೇವ, ಗಣೇಶ, ಆರತಿ, ಖುಷಿ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಳಿಕ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಎಬಿವಿಪಿ ಮುಖಂಡರು ಮನವಿ ಪತ್ರ ಸಲ್ಲಿಸಿದರು.