ಎವಿಎಸ್ ಆಯುರ್ವೇದ ಕಾಲೇಜು ಕೊರೊನಾ ಸಮಯದಲ್ಲಿ ಗಮನಾರ್ಹ ಕೆಲಸ ಮಾಡಿದೆ- ಸುನೀಲಗೌಡ ಪಾಟೀಲ

ವಿಜಯಪುರ: ಎವಿಎಸ್ ಆಯುರ್ವೇದ ವೈದ್ಯ ಪದ್ಧತಿ ಕೊರೊನಾ ಸಂಕಷ್ಟ ಸಮಯದಲ್ಲಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯವಾಗಿರಲು ಬಹಳಷ್ಟು ಜನರಿಗೆ ನೆರವಾಗಿದೆ ಎಂದು ವಿಧಾನ ಪರಿಷತ ಸದಸ್ಯ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ 2017ನೇ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಅಂಗವಾಗಿ ನಡೆದ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಕೊರೊನಾ ಸಮಯದಲ್ಲಿ ರೋಗ ಪ್ರತೀರೋಧಕ ಚೂರ್ಣ ತಯಾರಿಸಿ ಕೊರೊನಾ ವಾರಿಯರ್ಸ್ ಮತ್ತು ಜನಸಾಮಾನ್ಯರಿಗೂ ಉಚಿತವಾಗಿ ವಿತರಿಸಿದೆ.  ಇದು ಅಂದಿನ ಕಠಿಣ ದಿನಗಳಲ್ಲಿ ಜನರಲ್ಲಿ ರೋಗ ಪ್ರತಿರೋಧಗ ಶಕ್ತಿ ಹೆಚ್ಚಳಕ್ಕೆ ಅನುಕೂಲವಾಗಿದೆ.  ಇನ್ನು ಮುಂದೆಯೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ವೈದ್ಯರು ನಡೆಸುವ ಸಂಶೋಧನೆಗಳಿಗೆ ಸಕಲ ರೀತಿಯ ನೆರವು ನೀಡಲಾಗುವುದು.  ಜನಸೇವೆಯೇ ನಮ್ಮ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳಿಗೆ ಬೇಕಾಗುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ.  ಹೀಗಾಗಿ ಹೆಚ್ಚೆಚ್ಚು ಸಂಶೋಧನೆ ನಡೆಸಬೇಕು ಎಂದು ಅವರು ಕರೆ ನೀಡಿದರು.

ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಉಪಪ್ರಾಚಾರ್ಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಜೆ. ಆರ್. ಜೋಶಿ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ರಾಜ್ಯದ ಅತೀ ಹಳೆಯ 4ನೇ ಮಹಾವಿದ್ಯಾಲಯವಾಗಿದೆ.  1991 ರಲ್ಲಿ ಇದೇ ಮಹಾವಿದ್ಯಾಲಯದಲ್ಲಿ ಆಧ್ಯಯನ ಮಾಡಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ಇಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಿನೆಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಲು ಹೆಮ್ಮೆ ಎನಿಸುತ್ತಿದೆ.  ನನ್ನ ಮಾತೃಸಂಸ್ಥೆಯಲ್ಲಿ ಈಗ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಈಗ ಪದವಿ ಪಡೆದಿರುವ ವೈದ್ಯರು ಸಮಾಜದಲ್ಲಿ ಉತ್ತಮ ಆರೋಗ್ಯ ಒದಗಿಸಲು ಮತ್ತು ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಎಎಂಎಸ್ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿನಿಯರಾದ ಕಸ್ತೂರಿ ಹೀರೆಮಠ ಮತ್ತು ನಂದಾ ಕುರಿ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.  ಈ ಘಟಿಕೋತ್ಸವದಲ್ಲಿ ಒಟ್ಟು 44 ಪದವಿ ಮತ್ತು 4 ಸ್ನಾತಕೋತ್ತರ ಪದವಿ  ಪ್ರಧಾನ ಮಾಡಲಾಯಿತು.

ಡಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ, ಉಪಪ್ರಾಚಾರ್ಯ ಡಾ. ಶಶಿಧರ ನಾಯಕ ಮುಂತಾದವರು ಉಪಸ್ಥಿತರಿದ್ದರು.

ಪ್ರಾಧ್ಯಾಪಕ ಡಾ. ಎಂ. ಎಚ್. ಬಿರಾದಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಸುಸ್ಮಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು.  ಡಾ. ಪ್ರಸಾದಶಕ್ತಿ ಗೆಣ್ಣೂರ ವಂದಿಸಿದರು.

Leave a Reply

ಹೊಸ ಪೋಸ್ಟ್‌