Rambhapuri Jagadguri: ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆ ಮುಖ್ಯ- ಶ್ರೀ ರಂಭಾಪುರಿ ಜಗದ್ಗುರು

ವಿಜಯಪುರ: ಜಾತಿಗಿಂತ ನೀತಿ(Policy rather than caste), ತತ್ವಕ್ಕಿಂತ ಆಚರಣೆ(Principle rather than principle) ಮುಖ್ಯವೆಂಬುದನ್ನು(Important) ಯಾರೂ ಮರೆಯಬಾರದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು(Rambhapuri Dr Veerasomeshwar Jagadguru) ಅಭಿಪ್ರಾಯಪಟ್ಟಿದ್ದಾರೆ. 

ಕನ್ನೂರು ಗುರುಮಠದಲ್ಲಿ ನಡೆದ ಲಿಂ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ 18ನೇ ವರ್ಷದ ಪುಣ್ಯಸ್ಮರಣೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಮಾನವ ಜೀವನ ಉತ್ಕೃಷ್ಟವಾದುದು.  ಜನ್ಮ ಜನ್ಮಗಳ ಪುಣ್ಯಫಲದಿಂದ ಮಾನವ ಜೀವನ ಪ್ರಾಪ್ತವಾಗಿದೆ.  ಜಾತಿ ಧರ್ಮಗಳ ಮಧ್ಯೆ ನಿರಂತರ ಸಂಘರ್ಷ ಉಂಟಾಗುತ್ತಿರುವುದು ಒಳ್ಳೆಯದಲ್ಲ.  ಆಧುನಿಕತೆ ಮತ್ತು ಸುಧಾರಣೆಯ ನೆಪದಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿಗೆ ಧಕ್ಕೆಯುಂಟಾಗುತ್ತಿದೆ.  ಯುವ ಜನಾಂಗದಲ್ಲಿ ಧರ್ಮಪ್ರಜ್ಞೆ ಮತ್ತು ರಾಷ್ಟ್ರಪ್ರಜ್ಞೆಯ ಅರಿವಿನ ಕೊರತೆ ಕಾಣುತ್ತಿದ್ದೇವೆ.  ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕೊಡುವ ಜವಾಬ್ದಾರಿ ಎಲ್ಲರ ಮೇಲಿದೆ.  ಬುದ್ಧಿ ಶಕ್ತಿ ಬೆಳೆದಷ್ಟು ಭಾವನೆಗಳು ಬೆಳೆಯದ ಕಾರಣ ಎಲ್ಲ ರಂಗಗಳಲ್ಲಿ ಅಶಾಂತಿ, ಅತೃಪ್ತಿ ಹೆಚ್ಚುತ್ತಿದೆ.  ಇಂಥ ಸಂದರ್ಭದಲ್ಲಿ ವೀರಶೈವ ಧರ್ಮ ಸಕಲ ಜೀವಾತ್ಮರಿಗೂ ಸದಾ ಒಳಿತನ್ನೇ ಬಯಸುತ್ತ ಬಂದಿದೆ.  ಶ್ರೀ ಜಗದ್ಗುರು ರೇಣುಕಾಚಾರ್ಯರು ಜೀವನ ಶ್ರೇಯಸ್ಸಿಗೆ ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮಸೂತ್ರಗಳನ್ನು ಬೋಧಿಸಿ ಉದ್ಧರಿಸಿದ್ದಾರೆ.  ಸತ್ಯ ಶುದ್ಧವಾದ ಧರ್ಮ ಮಾರ್ಗದಲ್ಲಿ ನಡೆದು ಆರೋಗ್ಯಪೂರ್ಣ ಸಮಾಜವನ್ನು ಕಟ್ಟಬೇಕಾಗಿದೆ.  ಕನ್ನೂರು ಗುರುಮಠದ ಲಿಂ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ವಾಗ್ರಿಗಳಾಗಿ ಸಮಾಜ ಸಂಘಟಕರಾಗಿ ಧರ್ಮ-ಸಂಸ್ಕೃತಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇಂದಿನ ಪಟ್ಟಾಧ್ಯಕ್ಷ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಅತ್ಯಂತ ಕ್ರಿಯಾಶೀಲರಾಗಿ ಜನಾನುರಾಗಿ ಶಕ್ತಿಯಾಗಿ ಬೆಳೆಯುತ್ತಿರುವುದು ಸಂತೋಷವನ್ನು ಉಂಟು ಮಾಡುತ್ತದೆ ಎಂದು ಜಗದ್ಗುರುಗಳು ಸಂತಸ ವ್ಯಕ್ತಪಡಿಸಿದರು.

ಕನ್ನೂರು ಗುರುಮಠದಲ್ಲಿ ನಡೆದ ಲಿಂ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ 18ನೇ ವರ್ಷದ ಪುಣ್ಯಸ್ಮರಣೋತ್ಸವ ಶ್ರೀ ರಂಭಾಪುರಿ ಜಗದ್ಗುರುಳು ಪಾಲ್ಗೋಂಡರು

ಗುರುಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಮಾನವ ಜೀವನದಲ್ಲಿ ಒಂದು ಗುರಿ ಮತ್ತು ಗುರುವನ್ನು ಆಶ್ರಯಿಸಿ ಬಾಳಿದರೆ ಬದುಕು ಉಜ್ವಲಗೊಳ್ಳುತ್ತದೆ.  ಗುರು ಇಲ್ಲದ, ಗುರಿ ಇಲ್ಲದ ಜೀವನ ವ್ಯರ್ಥ.  ಮಾನವ ಧರ್ಮಕ್ಕೆ ಜಯವಾಗಲೆಂಬ ವಿಶ್ವಬಂಧುತ್ವದ ಸಂದೇಶವನ್ನು ಪರಿಪಾಲಿಸಿ ಸಾಮರಸ್ಯ ಕಾಪಾಡಿಕೊಂಡು ಬರುವುದು ಎಲ್ಲರ ಜವಾಬ್ದಾರಿಯಾಗಿದೆ.  ಶ್ರೀ ರಂಭಾಪುರಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ಧರ್ಮ ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಶಾಂತಿ ಮತ್ತು ನೆಮ್ಮದಿಯಿಲ್ಲದ ಬದುಕಿಗೆ ಒಂದಿಷ್ಟಾದರೂ ಆಧ್ಯಾತ್ಮದ ಅರಿವು ಅವಶ್ಯಕ.  ಶಿವಜ್ಞಾನ ಮತ್ತು ಗುರು ಕಾರುಣ್ಯ ಜೀವನದ ಉನ್ನತಿಗೆ ಬಹುದೊಡ್ಡ ಶಕ್ತಿಯಾಗಿದೆ.  ವೀರಶೈವ ಧರ್ಮದಲ್ಲಿ ಆಚಾರ್ಯರು ಮತ್ತು ಶರಣರು ಅಮೂಲ್ಯ ತತ್ವಗಳನ್ನು ಬೋಧಿಸಿದ್ದಾರೆ.  ಅವುಗಳನ್ನು ಪಾಲಿಸಿಕೊಂಡು ಮುನ್ನಡೆದರೆ ಜೀವನ ವಿಚಾರ ಧಾರೆಗಳನ್ನು ಸಾರ್ಥಕಗೊಳ್ಳುತ್ತದೆ ಎಂದು ಹೇಳಿದರು.

11 ದಿನಗಳ ಕಾಲ ಇಳಕಲ್ಲ-ಗುಡೂರಿನ ಅನ್ನದಾನ ಶಾಸ್ತ್ರಿಗಳಿಂದ ಕಲಬುರ್ಗಿ ಶರಣಬಸವೇಶ್ವರ ಪುರಾಣಪ್ರವಚನ ನಡೆಸಿಕೊಟ್ಟರು.  ನಾಗಠಾಣ ಹಿರೇಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಎಮ್ಮಿಗನೂರು ವಾಮದೇವ ಮಹಂತ ಶಿವಾಚಾರ್ಯರು ಉಪದೇಶಾಮೃತ ನೀಡಿದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಡಾ. ಮಂಜಮ್ಮ ಜೋಗತಿ ಅವರಿಗೆ ಸಮಾಜ ಸೇವಾ ಚಂದ್ರಿಕೆ ಮತ್ತು ಹೊರ್ತಿಯ ಅಣ್ಣಪ್ಪ ಖೈನೂರು ಇವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಮಸ್ಕಿ ಗುರುಶಾಂತ ತಡವಲಗಾ ರಾಚೋಟೇಶ್ವರ ಶಿವಾಚಾರ್ಯರು, ಗುಡ್ಡಾಪುರ ಗುರುಪಾದ ವರರುದ್ರಮುನಿ ಶಿವಾಚಾರ್ಯರು, ಚಿಮ್ಮಲಗಿ ಸಿದ್ಧರೇಣುಕ ಶಿವಾಚಾರ್ಯರು, ಬೊಮ್ಮನಹಳ್ಳಿ ಶಿವಾಚಾರ್ಯರು, ಶಿರಸ್ಯಾಡ ಮುರುಘೇಂದ್ರ ಶಿವಾಚಾರ್ಯರು, ಜಮಖಂಡಿ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಪುಣ್ಯಸ್ಮರಣೋತ್ಸವ ಅಂಗವಾಗಿ 1008 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯ ನಡೆಯಿತು.  ಸಮಾರಂಭಕ್ಕೂ ಮುನ್ನ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರನ್ನು ಅಶ್ವಾರೂಢ ಸಾರೋಟ ಮೆರವಣಿಗೆಯೊಂದಿಗೆ ಬರಮಾಡಿಕೊಳ್ಳಲಾಯಿತು.

Leave a Reply

ಹೊಸ ಪೋಸ್ಟ್‌