ವಿಜಯಪುರದಲ್ಲಿ ಮಾನವ ಹಕ್ಕು, ಪೋಕ್ಸೋ ಕುರಿತು ಕಾನೂನು ಅರಿವು ಕಾರ್ಯಕ್ರಮ

ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ತುಂಗಳ ಪಿಯು ಕಾಲೇಜ್‌ನಲ್ಲಿ ಮಾನವ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಈ ಅರಿವು ಕಾರ್ಯಕ್ರಮದಲ್ಲಿ ಕಾಲೇಜಿನ 350 ವಿದ್ಯಾರ್ಥಿ- ವಿದ್ಯಾಥಿನಿಯರು ಭಾಗವಹಿಸಿದ್ದರು.  ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಕಾನೂನಿನ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ […]

ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ಧರಾಮಯ್ಯ- ಬರ ಪರಿಹಾರ ಶೀಘ್ರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ ರೂ. 18177.44 ಕೋ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ ರೂ. 4663.12 ಕೋ. ಇನ್‌ಪುಟ್‌ ಸಬ್ಸಿಡಿ, ರೂ. 12,577.86 ಕೋ. ತುರ್ತು ಪರಿಹಾರ, ರೂ. 566.78 ಕೋ. ಕುಡಿಯುವ ನೀರಿಗಾಗಿ ಹಾಗೂ ರೂ. 363.68 ಕೋ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, […]

ವಿಜಯ ದಿವಸ ಕಾರ್ಯಕ್ರಮ: ದೇಶಕ್ಕೆ ವೀರ ಯೋಧರ ಕೊಡುಗೆ ಅಪಾರ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಇಂಡೋ-ಪಾಕ್ 1971ರ ಯುದ್ಧದಲ್ಲಿ ಭಾಗವಹಿಸಿದ    ಕೊಡುಗೆ ಯೋಧರು ಇಂದಿನ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನಮ್ಮೆಲ್ಲರಿಗೂ ಹೆಮ್ಮೆ ಹಾಗೂ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಸೈನಿಕ ಶಾಲೆಯ ಸಭಾಭವನದಲ್ಲಿ ಇತ್ತಿಚೆಗೆ ನಡೆದ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ, ಯುದ್ಧದಲ್ಲಿ ಪಾಲ್ಗೊಂಡ ಯೋಧರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸೈನಿಕ ಶಾಲೆಯ ಪ್ರಾಂಶುಪಾಲರಾದ […]