ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ತುಂಗಳ ಪಿಯು ಕಾಲೇಜ್‌ನಲ್ಲಿ ಮಾನವ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಈ ಅರಿವು ಕಾರ್ಯಕ್ರಮದಲ್ಲಿ ಕಾಲೇಜಿನ 350 ವಿದ್ಯಾರ್ಥಿ- ವಿದ್ಯಾಥಿನಿಯರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಕಾನೂನಿನ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಕುಂದರ, ಎಸ್ಪಿ ಋಷಿಕೇಶ ಸೋನಾವಣೆ, ವಿಜಯಪುರ ಗ್ರಾಮೀಣ ಡಿವೈಎಸ್ಪಿ ಗಿರಿಮಲ್ಲಪ್ಪ ತಳಕಟ್ಟಿ, ಸಿಪಿಐ ರಾಯಗೊಂಡ ಜಾನರ, ಉಪನ್ಯಾಸಕ ಮತ್ತು ಪ್ಯಾನಲ್ ವಕೀಲ ಜಿ. ವಿ. ಖುದಾನಪೂರ ಹಾಗೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.