ವಿಜಯ ದಿವಸ ಕಾರ್ಯಕ್ರಮ: ದೇಶಕ್ಕೆ ವೀರ ಯೋಧರ ಕೊಡುಗೆ ಅಪಾರ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಇಂಡೋ-ಪಾಕ್ 1971ರ ಯುದ್ಧದಲ್ಲಿ ಭಾಗವಹಿಸಿದ    ಕೊಡುಗೆ ಯೋಧರು ಇಂದಿನ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನಮ್ಮೆಲ್ಲರಿಗೂ ಹೆಮ್ಮೆ ಹಾಗೂ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.

ನಗರದ ಸೈನಿಕ ಶಾಲೆಯ ಸಭಾಭವನದಲ್ಲಿ ಇತ್ತಿಚೆಗೆ ನಡೆದ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ, ಯುದ್ಧದಲ್ಲಿ ಪಾಲ್ಗೊಂಡ ಯೋಧರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ, ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಅಧಿಕಾರಿಗಳು ಮಾಜಿ ಸೈನಿಕರು ಸೈನಿಕ ಶಾಲೆಯ ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌