ನಗರವನ್ನು ಸ್ವಚ್ಚ ಹಾಗೂ ಸುಂದರವನ್ನಾಗಿಸಿ – ಲೋಕಾಯುಕ್ತ ಎಸ್. ಪಿ ಹಣಮಂತರಾಯ
ವಿಜಯಪುರ: ಜಿಲ್ಲೆಯು ಐತಿಹಾಸಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿದ್ದು, ಇದೊಂದು ಪ್ರವಾಸಿ ತಾಣವಾಗಿದೆ. ದೇಶ- ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದು, ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಲೋಕಾಯುಕ್ತ ಎಸ್ಪಿ ಹನಮಂತರಾಯ ಹೇಳಿದ್ದಾರೆ. ನಗರದ ಸೆಟ್‌ಲೈಟ್ ಬಸ್ ನಿಲ್ದಾಣ, ಶಿವಾಜಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಕೋರ್ಟ್, ಗಗನ ಮಹಲ್ ಹಾಗೂ ಎಪಿಎಸಿ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು. ಸೆಟ್‌ಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಗೋಡೆ ಆವರಣ ಸುತ್ತಲೂ ನಾನಾ ಗಿಡ ಮರಗಳ […]
ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶ- ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿಕೊಳ್ಳf- ಟಿ. ಭೂಬಾಲನ ಕರೆ
ವಿಜಯಪುರ: ನಮ್ಮ ಜಿಲ್ಲೆಯು ಪ್ರಮುಖವಾಗಿ ಕೃಷಿ ಆಧಾರಿತವಾಗಿದೆ. ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರವನ್ನು ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. […]