ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶ- ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಸಿಕೊಳ್ಳf- ಟಿ. ಭೂಬಾಲನ ಕರೆ

ವಿಜಯಪುರ: ನಮ್ಮ ಜಿಲ್ಲೆಯು ಪ್ರಮುಖವಾಗಿ ಕೃಷಿ ಆಧಾರಿತವಾಗಿದೆ.  ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಅವರು ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರವನ್ನು ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. ರೈತರು ಕೃಷಿಯಲ್ಲಿ ವೈಜ್ಞಾನಿಕ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಕೃಷಿಯೊಂದಿಗೆ ಉಪ ಕಸುಬನ್ನು ಅಳವಡಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆ ಗಳೊಂದಿಗೆ ಮಿಶ್ರ ಬೇಸಾಯಕ್ಕೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ರೈತರಿಗೂ ಅನೂಕೂಲವಾಗುವ ನಿಟ್ಟಿನಲ್ಲಿ ಇಂದು ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶವನ್ನು ಏರ್ಪಡಿಸಲಾಗಿದೆ. ಇದರಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಕೃಷಿಗೆ ಸಂಬಂಧಿಸಿದ ಇಂತಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಮಹಿಳಾ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಸುಮಾರು 35 ರೈತ ಸಂಪನ್ಮೂಲ ಸಂಸ್ಥೆಗಳು ಈ ಸಮಾವೇಶದಲ್ಲಿ ಪಾಲ್ಗೊಂಡಿವೆ ಎಂದು ಅವರು ಹೇಳಿದರು.

ವಿಜಯಪುರದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶದ ಅಂಗವಾಗಿ ತೆರೆಯಲಾಗಿದ್ದ ಪ್ರದರ್ಶನ ಮಳಿಗೆಯನ್ನು ಟಿ. ಭೂಬಾಲನ್ ವೀಕ್ಷಿಸಿದರು

ಈ ಸಮಾವೇಶದಲ್ಲಿ ನುರಿತ ಕೃಷಿ ತಜ್ಞರ ಸಲಹೆಗಳನ್ನು ಪಡೆದುಕೊಂಡು ಕೃಷಿಯಲ್ಲಿ ಹೆಚ್ಚುವರಿ ಇಳುವರಿ ಪಡೆಯುವ ಕ್ರಮಗಳನ್ನು ಅನುಸರಿಸಬೇಕು. ಬರಗಾಲ ಪರಿಹಾರ ಪಡೆದುಕೊಳ್ಳಲು ರೈತರು ಫ್ರೂಟ್ಸ ತಂತ್ರಾಂಶದಲ್ಲಿ ವಿವರ ನೋಂದಾಯಿಸಿಕೊಳ್ಳಬೇಕು ಎಂದು ಅವರು ಹೇಳಿದರ.

ಈ ಡಾ. ಮಹಾತೇಂಶ ಬಿರಾದಾರ, ಕೃಷಿ ಕಲ್ಪ ಫೌಂಡೇಶನ್ ಸಿಇಓ ಸಿ. ಎಂ. ಪಾಟೀಲ ಹಾಗೂ ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷೆ ದಾನಮ್ಮ ಪಾಟೀಲ ಅವರು ಮಾತನಾಡಿದರು.

ಎಂಟು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳು

ಮುತ್ತಗಿ, ಪಲಂಧು ರೈತ ಉತ್ಪಾದಕ ಸಂಸ್ಥೆಯಿAದ ಲಿಂಬೆ ಮತ್ತು ಈರುಳ್ಳಿ ಸಂಸ್ಕರಣೆ ಪದಾರ್ಥಗಳು, ಗೋಳಸಂಗಿ ಗ್ರಾಮದ ಗೋಪಾಲ ರೈತನಿಂದ ಕಡಲೆ ಬೆಳೆ ಮತ್ತು ತೊಗರಿ ಬೆಳೆ, ಕೃಷಿ ತಂತ್ರ ಸಂಸ್ಥೆಯಿಂದ ಮಣ್ಣು ಪರೀಕ್ಷೆ ಯಂತ್ರ, ಸೆಲ್ಕೋ ಸೋಲಾರ್ ಕಂಪನಿಯಿAದ ಆಹಾರ ಧಾನ್ಯ ಸಂಸ್ಕರಣಾ ಯಂತ್ರಗಳು, ಪರಂಪರಾಗತ ರೈತ ಸಂಸ್ಥೆಯಿAದ ಶೇಂಗಾ, ಕುಸುಬೆ, ಕೊಬ್ಬರಿ, ಎಣ್ಣೆ, ಸಿದ್ದೇಶ್ವರ ಸಂಸ್ಥೆಯಿAದ ಗೋ ಆಧಾರಿತ ಉತ್ಪನ್ನಗಳು, ಅಮೃತ ಆರ್ಗ್ಯಾನಿಕ್ಸ್ನಿಂದ ಸಾವಯುವ ಗೊಬ್ಬರ, ಸಫಲ್ ಸಂಸ್ಥೆಯಿAದ ಬೆಳೆಗೆ ನೀರು ಮಾಪನ ಯಂತ್ರಗಳ ಕುರಿತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳು ಗಮನ ಸೆಳೆದವು.

ಈ ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ. ವಿಲಿಯಮ್ಸ್ ರಾಜಶೇಖರ, ತೋಟಗಾರಿಕೆ ಉಪ ನಿರ್ದೇಶಕ ಭಾವಿದೊಡ್ಡಿ ರಾಹುಲ ಕುಮಾರ, ಕೃಷಿ ಸಹಾಯಕ ನಿರ್ದೇಶಕ ರಾಘವೇಂದ್ರ ಬಗಲಿ, ಬಿ ಎಲ್ ಡಿ ಇ ಸಂಸ್ಥೆಯ ಕುಲಕರ್ಣಿ, ವಿಜನ್ ಗ್ರೂಪ್ ಸ್ಪಾರ್ಟ ಅಪ್ ಚೇರಮನ್ ಪ್ರಶಾಂತ ಪ್ರಕಾಶ, ವೇಗ್ರೋ ಸಂಸ್ಥೆ ಸಂಗ್ರಹಣಾ ಮುಖ್ಯಸ್ಥ ಸಾಗರ, ಕ್ಲೋವರ್ ವೆಂಚರ್ ಸಂಸ್ಥೆ ಸಂಗ್ರಹಣೆ ಮುಖ್ಯಸ್ಥ ರಘುನಾಥ, ಫಸಲ್ ಸಂಸ್ಥೆ ಮಾರಾಟ ಮತ್ತು ಮಾರ್ಕೆಟಿಂಗ್ ಮುಖ್ಯಸ್ಥ ಜಿತೇಂದ್ರ ಸಿಂಘಾಲ್, ಹುನಗುಂದ ಎಫ್. ಪಿ. ಓ ನಿರ್ದೇಶಕ  ರವಿ ಸಜ್ಜನರ, ಜಿಜ್ಞೇಶ್ ಜೋಶಿ, ಪ್ರಶಾಂತ ಹೆಗಡೆ ಸೇರಿದಂತೆ ನಾನಾ ಕೃಷಿ ಸಂಸ್ಥೆಗಳ ಮುಖ್ಯಸ್ಥರು, ಜಿಲ್ಲಾ ಮಟ್ಟದ ಕೃಷಿ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌