ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರಕಾರ ಸ್ಪಂದಿಸಬೇಕು: ಸಂಗಮೇಶ ಬಬಲೇಶ್ವರ

ವಿಜಯಪುರ: ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂ ಮಾಡುವಂತೆ ಕಳೆದ 29 ದಿನಗಳಿಂದ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರಕಾರ ಶೀಘ್ರ ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ. ನಗರದಲ್ಲಿ ಜಿಲ್ಲಾಧಿಕಾರಿ ಆವರಣದ ಬಳಿ ಕಳೆದ 29 ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಪನ್ಯಾಸಕರನ್ನು ಭೇಟಿ ಮಾಡಿ ಅವರ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ಕಳೆದ 20 ವರ್ಷದಿಂದ ಸಾವಿರ ರೂಪಾಯಿ […]

ಜ. 15ರೊಳಗೆ ಸೈಕ್ಲಿಂಗ್ ವೆಲೊಡ್ರಂ ಕಾಮಗಾರಿ ಪೂರ್ಣಗೊಳಿಸಿ: ಸಿಇಓ ರಾಹುಲ್ ಶಿಂಧೆ ಸೂಚನೆ

ವಿಜಯಪುರ: ವಿಜಯಪುರ ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಇದೇ ಜನವರಿ 15ರೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್ ವೆಲೋಡ್ರಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೈಕ್ಲಿಂಗ ವೆಲೊಡ್ರೊಂ ಕಾಮಗಾರಿಯು ಆರಂಭವಾಗಿ ಬಹಳ ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಈ ಭಾಗದ ಸೈಕ್ಲಿಸ್ಟ್ ಗಳಿಗೆ ತೊಂದರೆಯಾಗುತ್ತಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಥಮಾಧ್ಯತೆಯಲ್ಲಿ ಬಾಕಿ ಉಳಿದ ಕಾಮಗಾರಿಯನ್ನು […]

ವೃಕ್ಷಾಥಾನ್ ಹೆರಿಟೇಜ್ ರನ್- 2023: ಯಾವ ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತೆ? ಪ್ರಶಸ್ತಿ ಮೊತ್ತವೇನಿದೆ? ಇಲ್ಲಿದೆ ಮಾಹಿತಿ

ವಿಜಯಪುರ: ಗುಮ್ಮಟ ನಗರಿಯಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಎರಡೇ ದಿನ ಬಾಕಿ ಉಳಿದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ.  ಈಗಾಗಲೇ ಪ್ರಶಸ್ತಿ ಮೊತ್ತ, ಮಾರ್ಗ, ಪದಕಗಳನ್ನು ಅಂತಿಮಗೊಳಿಸಲಾಗಿದ್ದು, ಶನಿವಾರ ಬಿಬ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು. ಈ ಬಾರಿ ಒಟ್ಟು ರೂ. 10 ಲಕ್ಷ ಬಹುಮಾನ ನಿಗದಿ ಪಡಿಸಲಾಗಿದ್ದು, ನಾಲ್ಕು ಕೆಟೆಗರಿಯಲ್ಲಿ ಒಟ್ಟು ತಲಾ 38 ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್- […]