ವೃಕ್ಷೊಥಾನ ಹೆರಿಟೇಜ್ ರನ್-2023: ಸ್ಮಾರಕಗಳ ಸಂರಕ್ಷಣೆ-ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಕೈ ಜೋಡಿಸಿ- ಸಚಿವ ಎಂ. ಬಿ. ಪಾಟೀಲ ಕರೆ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ಹೆರಿಟೇಜ್ ರನ್ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.   21 ಕಿ.ಮೀ, 10 ಕಿ.ಮೀ, 5 ಕಿ.ಮೀ, 3.50 ಕಿಮೀ ಮತ್ತು 800 ಮೀಟರ್ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಮ್ಯಾರಥಾನ್‍ಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸುಮಾರು 5 ಕಿ.ಮೀ. ಓಡಿ ನೆರೆದವರನ್ನು ಹುರುದುಂಬಿಸಿದರು.

ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾಕರಗಳ ರಕ್ಷಣೆ, ನೀರಿನ ಸದ್ಭಳಕೆಯೊಂದಿಗೆ ಗಿಡ-ಮರಗಳನ್ನು ಬೆಳೆಸಿ ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡುವ ಮೂಲಕ ವಿಜಯಪುರದ ಐತಿಹಾಸಿಕ ಗತವೈಭವನ್ನು ಮರಳಿ ಪಡೆಯಲು ಪ್ರತಿಯೊಬ್ಬರು ಕೈ ಜೋಡಿಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಕರೆ ನೀಡಿದರು.

ವಿಜಯಪುರ ನಗರದಲ್ಲಿ ನಡೆದ ವೃಕ್ಷೊಥಾನ್ ಹೆರಿಟೇಜ್ ರನ್- 2023 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಚಿವ ಎಂ. ಬಿ. ಪಾಟೀಲ ಮಾತನಾಡಿದರು

 

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವತನ್ನು ಸಾರುವ ನಿಟ್ಟಿನಲ್ಲಿ  ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ರವಿವಾರ ಹಮ್ಮಿಕೊಂಡ ವೃಕ್ಷತ್ಥಾನ್ ಹೆರಿಟೇಜ್ ರನ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಹಲವಾರು ಐತಿಹಾಸಿಕ ಸ್ಮಾರಕಗಳಿವೆÉ. ವಿಶ್ವ ಪ್ರಸಿದ್ಧ ಗೋಲಗುಂಬಜ್, ಇಬ್ರಾಹಿಂರೋಜಾ ಸೇರಿದಂತೆ ಹಲವು ಸ್ಮಾರಕಗಳನ್ನು ಜಿಲ್ಲೆ ಹೊಂದಿದೆ. ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಣೆ ಮಾಡಿ, ಅಭಿವೃದ್ದಿಪಡಿಸಿ ಸೂಕ್ತವಾದ ರಸ್ತೆ ಸಂಪರ್ಕ, ಮೂಲಭೂತ ಸೌಲಭ್ಯದೊಂದಿಗೆ ಪ್ರವಾಸೋದ್ಯಮ ಕ್ಷೇತ್ರ ಬೆಳವಣಿಗೆ, ವ್ಯಾಪಾರದಲ್ಲಿ ವೃದ್ದಿಯಾಗಿ ಕೋಟ್ಯಾಂತರ ಆದಾಯದೊಂದಿಗೆ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಈ ನಿಟ್ಟಿನಲ್ಲಿ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ಜಾಗೃತಿ ಮೂಡಿಸುವ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೇವಲ ದೊಡ್ಡ ದೊಡ್ಡ ನಗgಗÀಳಿಗೆ ಸೀಮಿತವಾಗಿದ್ದ ಮ್ಯಾರಥಾನ್ ವಿಜಯಪುರದಲ್ಲಿ ಯಶಸ್ವಿಯಾಗಿ ಕೈಗೊಂಡಿದ್ದು ವಿಶೇಷವಾಗಿದ್ದು, ಇದು ನಮಗೆ  ಗೌರವ ಹಾಗೂ ಹೆಮ್ಮೆಯಾಗಿದೆ. ಹಲವು ಸಾಮಾಜಿಕ ಕ್ಷೇತ್ರಗಳಲ್ಲಿ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಲತಜ್ಞರಾದ ರಾಜೇಂದ್ರಸಿಂಗ್ ಅವರು ಪ್ರಭಾವಿತರಾಗಿದ್ದು, ಈ ಮಾದರಿಯಲ್ಲಿಯೇ ನಾನೂ ಸಹ ರಾಜಸ್ಥಾನದಲ್ಲಿ ಮ್ಯಾರಾಥಾನ್ ಆಯೋಜಿಸುವುದಾಗಿ ತಿಳಿಸಿದ್ದು, ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ. ಪರಿಸರ ರಕ್ಷಣೆ, ಪರಿಸರ ಪ್ರೇಮಿ ಹಾಗೂ ಪರಿಸರ ಕುರಿತು ಅಪಾರ ಕಾಳಜಿ ಹೊಂದಿದ್ದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳಿಗೆ  ಈ ಮ್ಯಾರಾಥಾನ್ ಅರ್ಪಣೆ ಮಾಡಲಾಗಿದೆ ಎಂದು ಹೇಳಿದರು.

ಕಳೆದ 2016ರಲ್ಲಿ ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ  ವೃಕ್ಷ ಅಭಿಯಾನ ಆರಂಭಿಸುವ ಮೂಲಕ ಜಿಲ್ಲೆಯ ಅರಣ್ಯೀಕರಣವನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಈಗಾಗಲೇ 1.5 ಕೋಟಿ ಗಿಡಗಳನ್ನು ನಡೆಸಲಾಗಿದೆ. ಜಿಲ್ಲೆಯ ಅರಣ್ಯ ಪ್ರದೇಶ ಶೇ.0.17 ರಿಂದ ಶೇ.2ಕ್ಕೆ ತಲುಪಲು ಸಾಧ್ಯವಾಗಿದೆ. ಜಿಲ್ಲೆಯ ಹಸರೀಕರಣ ಹಾಗೂ ಐತಿಹಾಸಿಕ ಸ್ಮಾರಕಗಳ ಮಹತ್ವ ವಿಶ್ವದಾದ್ಯಂತ ಸಾರುವ ಈ ವಿಶೇಷವಾದ ಕಾರ್ಯಕ್ರಮಕ್ಕೆ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಕೆಬಿಜೆಎನ್‍ಎಲ್, ಎನ್‍ಟಿಪಿಸಿ, ವೃಕ್ಷ ಅಭಿಯಾನ ಪ್ರತಿಷ್ಠಾನ ಸೇರಿದಂತೆ ಸಾರ್ವಜನಿಕರು ಸಂಘ-ಸಂಸ್ಥೆಗಳು ಕೈ ಜೋಡಿಸಿರುವುದರಿಂದ ಈ ಅಭುತಪೂರ್ವ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಹಾಗೂ ಮ್ಯಾರಾಥಾನ್‍ನಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ರಕ್ಷಣೆ ಸಂರಕ್ಷಣೆಯ ಜವಾಬ್ದಾರಿ ನನ್ನದು, ನಮ್ಮದು ಎಂದಾದಾಗ ಮಾತ್ರ ಬದಲಾವಣೆಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಈ ಮಹತ್ವದ ಕಾರ್ಯಕ್ಕೆ ಕೈ ಜೋಡಿಸಬೇಕು.  ಪರಿಸರ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಲಿದೆ. ಮುಂದಿನ ವರ್ಷದ ಮ್ಯಾರಾಥಾನ್ 2024 ಡಿಸೆಂಬರ್ 2ನೇ ವಾರದಲ್ಲಿ ಆಯೋಜಿಸಲಾಗುವುದು ಎಂದು ಘೋಷಿಸಿದ ಅವರು, ವಿಜಯಪುರ ನಗರ ಅಷ್ಟೇ ಅಲ್ಲ ಜಿಲ್ಲೆಯ ಪ್ರತಿಯೊಂದು  ಹಳ್ಳಿ ಹಳ್ಳಿಗೆ ಸಂಪರ್ಕ ಸಾಧಿಸಿಕೊಂಡು  ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಿ, ಗ್ರಾಮೀಣ ಭಾಗದ ಜನರು ಮ್ಯಾರಾಥಾನ್‍ದಲ್ಲಿ ಭಾಗವಹಿಸುವಂತಾಗಬೇಕು. ಅಂದಾಗ ಮಾತ್ರ ಅರಣ್ಯೀಕರಣ ನಿಗದಿತ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಲ ಸಂರಕ್ಷಣೆ ತಜ್ಞರು ಹಾಗೂ ಪರಿಸರವಾದಿಗಳಾದ ಮ್ಯಾಗಸ್ಸೇ ಪ್ರಶಸ್ತಿ ಪುರಸ್ಕøತರಾದ ರಾಜೇಂದ್ರ ಸಿಂಗ್ ಅವರು ಮಾತನಾಡಿ, ವಿಜಯಪುರದ ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಮ್ಮಿಕೊಂಡ ವೃಕ್ಷತ್ಥಾನ ಹೆರಿಟೇಜ್ ರನ್ ಮ್ಯಾರಾಥಾನ್‍ನಲ್ಲಿ ಹಲವರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿದ್ದು ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಮೆರಗು ನೀಡಿದಂತಾಗಿದೆ. ಸ್ವಾಸ್ತಯುತವಾದ ಸುಂದರ ಜೀವನ ನಡೆಸಲು ಗಿಡ-ಮರಗಳು, ನೀರು ಸೇರಿದಂತೆ ಸ್ವಚ್ಛ ಪರಿಸರ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ  ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ   ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆÉ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ, ಎನ್ ಟಿಪಿಸಿಯ ಮುಖ್ಯಸ್ಥರಾದ ವಿ.ಕೆ ಪಾಂಡೆ,ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬೆಳಗಾವಿ ವೃತ್ತ, ಮಂಜುನಾಥ  ಆರ್.ಚವ್ಹಾಣ, ಕೆಎಸ್‍ಡಿಎಲ್ ಎಂ.ಡಿ. ಪ್ರಶಾಂತ,   ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಕೆ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಾನಾ ವಿಭಾಗದ ಓಟಗಳಿಗೆ ಚಾಲನೆ

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀ¯ ಯತ್ನಾಳ, ವಿಧಾನ ಪರಿಷತ್ತಿನ ಸದಸ್ಯರಾದ ಸುನೀಲ್‍ಗೌಡ ಬಿ.ಪಾಟೀಲ,ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ನಾನಾ ವಿಭಾಗದ ಓಟಗಳಿಗೆ ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

Leave a Reply

ಹೊಸ ಪೋಸ್ಟ್‌