ರಾತ್ರಿಯಿಡಿ ಡ್ಯೂಟಿ- ನಸುಕಿನ ಜಾವ 21 ಕಿ. ಮೀ. ಓಟದಲ್ಲಿ ಪಾಲ್ಗೊಂಡ ಡಿಆರ್ ಪೊಲೀಸ್ ಪೇದೆ ಭೀಮಾಶಂಕರ ಮಾಡಗ್ಯಾಳ- ಇವರ ಕ್ರೀಡಾಸ್ಪೂರ್ತಿ ಇತರರಿಗೆ ಮಾದರಿ
ವಿಜಯಪುರ: ರಾತ್ರಿಯಿಡಿ ಕರ್ತವ್ಯ ನಿರ್ವಹಿಸುವ ಜೊತೆಗೆ ನಸುಕಿನ ಜಾವ ನಡೆದ ವೃಕ್ಷೊಥಾನ್ ಹೆರಿಟೇಜ್ ರನ್-2023ರ 21 ಕಿ. ಮೀ. ಓಟದಲ್ಲಿ ಪಾಲ್ಗೋಂಡ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಪೇದೆಯೊಬ್ಬರು ಕ್ರೀಡಾಭಿಮಾನ ಮೆರೆದಿದ್ದಾರೆ. ಹಳಗುಣಕಿ ಗ್ರಾಮದ ಮತ್ತು ವಿಜಯಪುರ ಮೀಸಲು ಪಡೆ ಪೊಲೀಸ್ ಪೇದೆಯಾಗಿರುವ ಭೀಮಾಶಂಕರ ಮಾಡಗ್ಯಾಳ(38) ಡಿಸೆಂಬರ್ 23ರಂದ ರಾತ್ರಿಯಿಡೀ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ, ಮರುದಿನ ಡಿಸೆಂಬರ್ 24 ರಂದು ರವಿವಾರ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾದ 21 ಕಿ. ಮೀ. ಮ್ಯಾರಾಥಾನ್ ಓಟದಲ್ಲಿ ಪಾಲ್ಗೋಂಡಿದ್ದಾರೆ. ಅಷ್ಟೇ […]
ಲೋಕಸಭೆ ಚುನಾವಣೆಗೆ ಟಿಕೇಟ್ ನೀಡಿ- ಸಚಿವ ಸತೀಶ ಜಾರಕಿಹೊಳಿಗೆ ಅರ್ಜಿ ಸಲ್ಲಿಸಿದ ಅರ್ಜುನ ರಾಠೋಡ
ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿ ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ಮನವಿ ಪತ್ರ ಸಲ್ಲಿಸಿದ್ದಾರೆ. ವಿಜಯಪುರಕ್ಕೆ ಭೇಟಿ ನೀಡಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಅರ್ಜುನ ರಾಠೋಡ, ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. ಈವರೆಗೆ ನಡೆದ ಎಲ್ಲ ವಿಧಾನ ಸಭೆ ಮತ್ತು ವಿಧಾನ ಪರಿಷತ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದೇನೆ. ಅಷ್ಟೇ ಅಲ್ಲ, ಪಕ್ಷದ […]
ಸಚಿವ ಸತೀಶ ಜಾರಕಿಹೊಳಿ ಅವರಿಂದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ- ಶೀಘ್ರವೇ ವಿಮಾನಗಳ ಹಾರಾಟದ ಭರವಸೆ
ವಿಜಯಪುರ: ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಟರ್ಮಿನಲ್ ಕಟ್ಟಡ, ನಿಲ್ದಾಣದ ರನವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಳು ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವುದನ್ನು ಒಳಗೊಂಡಂತೆ ಎಲ್ಲ ಭೌತಿಕ ಕಾಮಗಾರಿಗಳು ಶೇ.90ರಷ್ಟು […]
ವೀರಶೈವ ಮಹಾಸಭೆ ಬಿ ಎಸ್ ವೈ ಅಂದರೆ ಭೀಮಣ್ಣ, ಶಾಮನೂರು, ಯಡಿಯೂರಪ್ಪ ಆಗಿದೆ- ಕೊರೊನಾ ಸಂದರ್ಭದಲ್ಲಿ ರೂ 40000 ಕೋ. ಭ್ರಷ್ಟಾಚಾರ ನಡೆದಿದೆ- ಯತ್ನಾಳ ಆರೋಪ
ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭೆ ಬಿ ಎಸ್ ವೈ ಅಂದರೆ ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ ಮತ್ತು ಬಿ. ಎಸ್. ಯಡಿಯೂರಪ್ಪ ಅವರ ಕುಟುಂಬದಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಣಿಸಿಕೊಂಡ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ರೂ. 40 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು. ವೀರಶೈವ ಮಹಾಸಭೆ ಮಹಾಧಿವೇಶನ ವಿಚಾರ ದಾವಣಗೆರೆಯಲ್ಲಿ […]