ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿ ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ಮನವಿ ಪತ್ರ ಸಲ್ಲಿಸಿದ್ದಾರೆ.
ವಿಜಯಪುರಕ್ಕೆ ಭೇಟಿ ನೀಡಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಅರ್ಜುನ ರಾಠೋಡ, ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. ಈವರೆಗೆ ನಡೆದ ಎಲ್ಲ ವಿಧಾನ ಸಭೆ ಮತ್ತು ವಿಧಾನ ಪರಿಷತ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದೇನೆ. ಅಷ್ಟೇ ಅಲ್ಲ, ಪಕ್ಷದ ವತಿಯಿಂದ ನೀಡಲಾದ ಎಲ್ಲ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ನನ್ನ ಸೇವೆಯನ್ನು ಪರಿಗಣಿಸಿ ನನಗೆ ಹೆಚ್ಚಿನ ಜನಸೇವೆ ಮಾಡಲು 2024ರ ವಿಜಯಪುರ ಲೋಕಸಭೆ(ಮೀಸಲು) ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ವಿನಂತಿ ಮಾಡುವುದಾಗಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ, ಶಾಸಕರಾದ ಸಿ. ಎಸ್. ನಾಡಗೌಡ ಮತ್ತು ಅಶೋಕ ಮನಗೂಳಿ ಅವರು ಉಪಸ್ಥಿತರಿದ್ದರು.