ವಿಜಯಪುರ: ನಗರದ ಘೇವರಚಂದ ಕಾಲನಿಯಲ್ಲಿರುವ ಯುರೋ ಕಿಡ್ಸ್ ಪ್ರೀ ಸ್ಕೂಲಿನ ಮಕ್ಕಳು ಮತ್ತು ಪೋಷಕರಿಗಾಗಿ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಶ್ರೀ ಶಿವಾಜಿ ಕೋ-ಆಪ್. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸಂಜಯ ವಿ. ಜಾಧವ ಕ್ರೀಡಾಕೂಟ ಉದ್ಘಾಟಿಸಿದರು
ಬಳಿಕ ಮಾತನಾಡಿದ ಅವರು, ಶಾಲೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ಆರೋಗ್ಯದ ದೃಷ್ಟಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ತುಂಬಾ ಮುಖ್ಯವಾಗಿದೆ. ಪೋಷಕರು ಮತ್ತು ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯೆಯ ಜೊತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಮಕ್ಕಳು ಮತ್ತು ಅವರ ಪೋಷಕರಿಗೆ ನಾನಾ ರೀತಿಯ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ನಾನಾ ಕ್ರೀಡೆಗಳಲ್ಲಿ ವಿಜೇತ ಮಕ್ಕಳಿಗೆ ಮತ್ತು ಪೋಷಕರಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಸತೀಶ ಶಿಂತ್ರೆ, ಡಾ. ಪ್ರಮೋದ ಪಾಟೀಲ, ಕಿರಣ ಬಿರಾದಾರ, ಸಂಜಯ ಜಾಧವ, ಬಸವರಾಜ ಬಿರಾದಾರ, ಅಶೋಕ ಪವಾರ, ಮಾರುತಿ ಘೋರ್ಪಡೆ, ಗೀತಾ ಶಿಂತ್ರೆ, ಮೇಘಾ ಶಿಂಧೆ, ಶಾಲೆಯ ಮುಖ್ಯ ಶಿಕ್ಷಕಿ ಅಕ್ಷತಾ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.