ಡಾ. ಬಿ. ಆರ್. ಅಂಬೇಡ್ಕರ ಅವರ ಬದುಕು, ಸಾಧನೆ: ವಿಶೇಷ ಉಪನ್ಯಾಸಕ ಕಾರ್ಯಕ್ರಮ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಓದು ಎಂಬ ಡಾ. ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿಶೇಷ ನಗರದ ದರಬಾರ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ. ವಿ. ಬಿ. ಗ್ರಾಮ ಪುರೋಹಿತ ಅವರು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರಲ್ಲಿನ ಓದಿನ ಹಂಬಲ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ಪ್ರಾಚಾರ್ಯ ಟಿ. ಆರ್. ಕುಲಕರ್ಣಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ. ಈ ಸಂವಿಧಾನಕ್ಕನುಗುಣವಾಗಿ ನಡೆಯುವ ಮೂಲಕ ದೇಶವನ್ನು ಅಭಿವೃದ್ದಿಪಥದತ್ತ ಕೊಂಡೊಯ್ಯೋಣ ಎಂದು ಅವರು ಹೇಳಿದರು.

 

ಎ. ನಾಗರಾಜ ಮಾತನಾಡಿ, ಅಪಾರ ಪಾಂಡಿತ್ಯ ಹಾಗೂ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ರೈತರು, ಮಹಿಳೆಯರು, ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಏಳಿಗೆಗೆ ನಿರಂತರ ಹೋರಾಟ ಮಾಡಿ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರಕಿಸಲು ಶ್ರಮಿಸಿದರು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.  ವಿ. ಬಿ. ಕುಲಕರ್ಣಿ ವಂದಿಸಿದರು.  ಜಿ. ಬಿ. ಕುಲಕರ್ಣಿ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌