ಎ.ಎಸ್.ಪಿ ಕಾಮರ್ಸ್ ಕಾಲೇಜಿನಲ್ಲಿ ಬಿಬಿಎ ವಿಭಾಗದಿಂದ ಮಂಚಾ-ಮಚ್ಚಾ ವೃತ್ತಿಪರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಿ. ಕಾಮರ್ಸ್ ಕಾಲೇಜಿನ ಬಿಬಿಎ ವಿಭಾಗ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿದ್ದ ಜಿಲ್ಲಾ ಮಟ್ಟದ ಮಂಚ್- ಮಚ್ಚಾ ವೃತ್ತಿಪರ ಸ್ಪರ್ಧೆಯಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವರಣದಲ್ಲಿರುವ ಬಿಬಿಎ ಕಾಲೇಜಿನಲ್ಲಿ ನಡೆದ ಈ ವೃತ್ತಿಪರ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್, ಟೀಮ್ ಬಿಲ್ಡಿಂಗ್, ರಸಪ್ರಶ್ನೆ, ಅಡುಗೆ, ಛಾಯಾಚಿತ್ರ ಸ್ಪರ್ಧೆಗಳು ನಡೆದವು.  ಜಿಲ್ಲೆಯ ನಾನಾ ಭಾಗಗಳಿಂದ 29 ಪಿಯು ಕಾಲೇಜುಗಳ ಸುಮಾರು 500 ಜನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡರು.

ಒಟ್ಟು ಐದು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು.  ಪ್ರಥಮ ಸ್ಥಾನ ಪಡೆದವರಿಗೆ ರೂ. 2000 ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ರೂ. 1000 ನಗದು ಬಹುಮಾನ ನೀಡಲಾಯಿತು. ಈ ಸ್ಪರ್ಧೆಗಳಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜು ಮತ್ತು ಎ.ಎಸ್.ಪಾಟೀಲ ಕಾಮರ್ಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬಹುತೇಕ ಸ್ಪರ್ಧೆಗಳಲ್ಲಿ ಜಯಗಳಿಸಿದರು.  ಪ್ರತಿಯೊಂದು ಕಾಲೇಜಿನಲ್ಲಿ ತಲಾ ಎರಡು ಮತ್ತು ಅದಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ ಹಿನ್ನೆಲೆಯಲ್ಲಿ ಒಂದೊಂದು ತಂಡಕ್ಕೆ ಒಂದೊಂದು ಹೆಸರಾಂತ ಸಂಸ್ಥೆಗಳ ಹೆಸರುಗಳನ್ನು ನೀಡಲಾಗಿತ್ತು.  ಈ ತಂಡಗಳಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ತಲಾ ಎರಡು ವಿಭಾಗಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿತು.

ಸಂಜೆ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎ.ಎಸ್. ಪಾಟೀಲ ಕಾಮರ್ಸ್ ಕಾಲೇಜಿನ ಎಂಬಿಎ ವಿಭಾಗದ ನಿರ್ದೇಶಕ ಡಾ. ಚಿದಾನಂದ ಬ್ಯಾಹಟ್ಟಿ, ಸಹಾಯಕ ಪ್ರಾಧ್ಯಾಪಕರಾದ ಲಕ್ಷಣ ಪವಾರ ಮತ್ತು ವರ್ಷಾ ದೇಸಾಯಿ, ಗಂಗಾಧರ ಮಮದಾಪುರ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಡಾ. ಅಶ್ವಿನಿ ಯರನಾಳ, ಡಾ. ಮುರಗೇಶ ಪಟ್ಟಣಶೆಟ್ಟಿ, ಮಹಾಂತೇಶ ಕನಮಡಿ, ವಿನಯ ಡರ್ಬಿ, ರವಿ ಚವ್ಹಾಣ, ಎಸ್. ಬಿ. ಆರ್ಟ್ಸ್ ಮತ್ತು ಕೆಸಿಪಿ ಸಾಯಿನ್ಸ್ ಕಾಲೇಜಿನ ಡಾ. ಎಸ್. ಬಿ. ಭೈರವಾಡಗಿ, ಎಸ್. ಜಿ. ಜೋಶಿ, ಎಸ್. ವಿ. ವಂಬಾಸೆ ಮುಂತಾದವರು ಉಪಸ್ಥಿತರಿದ್ದರು.

ಸ್ಪರ್ಧೆಗಳು ಮತ್ತು ವಿಜೇತ ತಂಡಗಳ ಹೆಸರುಗಳು ಇಂತಿವೆ.

1.ಟೀಮ್ ಬಿಲ್ಡಿಂಗ್(ಒಗ್ಗಟ್ಟಿನಲ್ಲಿ ಬಲವಿದೆ): ಎಸ್.ಎಸ್. ಪಾಟೀಲ ಕಾಮರ್ಸ್ ಪಿಯು ಕಾಲೇಜಿನ ರಿಲಾಯನ್ಸ್ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಬಿಪಿಸಿಎಲ್ ತಂಡ(ದ್ವಿತೀಯ)

2.ಕ್ವಿಜ್(ವಿಚಾರ ವಿಸ್ಪೋಟ್):  ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ(ಪ್ರಥಮ), ಎ.ಎಸ್. ಪಾಟೀಲ ಕಾಮರ್ಸ್ ಪಿಯು ಕಾಲೇಜಿನ ಇನಫೋಸಿಸ್ ತಂಡ(ದ್ವಿತೀಯ)

3. ಕುಕ್ಕಿಂಗ್(ಆಹಾರ ಅನುಭವ): ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಮಹಿಂದ್ರಾ ಆ್ಯಂಡ್ ಮಹಿಂದ್ರಾ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ(ದ್ವಿತೀಯ)

4. ಫೋಟೋ ಮತ್ತು ವಿಡಿಯೋಗ್ರಾಫಿ(ಕ್ಷಣಗಳ ಕಥೆಗಳು): ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಬಿಪಿಸಿಎಲ್ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ(ದ್ವಿತೀಯ)

5. ರ್ಯಾಂಪ್ ವಾಕ್(ನೋಡಿ ಸ್ವಾಮಿ ನಾವಿರೋದು ಹೀಗೆ): ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ(ಪ್ರಥಮ), ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಆದಿತ್ಯ ಬಿರ್ಲಾ ತಂಡ(ದ್ವಿತೀಯ).

Leave a Reply

ಹೊಸ ಪೋಸ್ಟ್‌