ಚಡಚಣ ಪಟ್ಟಣದಲ್ಲಿ ಪೊಲೀಸರಿಂದ ಮಾದಕ ದ್ರವ್ಯಗಳ ಬಳಕೆ ವಿರುದ್ದ ಜನಜಾಗೃತಿ ಜಾಥಾ

ವಿಜಯಪುರ: ಚಡಚಣ ಪಟ್ಟಣದಲ್ಲಿ ಪೊಲೀಸರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಜಾಥಾ ನಡೆಸಿದರು. 

ಸಿಬಿಐ ಸುರೇಶ ಬೆಂಡೆಗುಂಬಳ ನೇತೃತ್ವದಲ್ಲಿ ಪಿಎಸ್‌ಐ ಸಂಜಯ ಕಲ್ಲೂರ ಮತ್ತು ಸಿಬ್ಬಂದಿ ಚಡಚಣ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸುವ ಮೂಲಕ.ಮಾದಕ ವಸ್ತುಗಳ ಬಳಕೆ ತಡೆಯುವ ಕುರಿತು ಜಾಗೃತಿ ಮೂಡಿಸಿದರು. ಅಲ್ಲದೇ, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮಾಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ ಬೆಂಡೆಗುಂಬಳ, ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಕಾನೂನು ಪ್ರಕಾರ ಅಪರಾಧವಾಗಿದ್ದು, ಅಂಥ ಚಟುವಟಿಕೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಹೇಳಿದರು.

ಸಿಗರೇಟು, ಮಾವಾ, ತಂಬಾಕು, ಗುಟಕಾಗಳಿಂದ ಆರಂಭವಾಗುವ ದುಶ್ಚಟಗಳು ಕ್ರಮೇಣ ಗಾಂಜಾ, ಕಫ್ ಸಿರಪ್, ವೈಟ್ನರ್,ಸ ಪೆಟ್ರೋಲ್ ಸೇರಿದಂತೆ ಹಲವು ಮಾದಕ ವಸ್ತುಗಳ ಸೇವನೆಯಂಥ ದುಶ್ಚಟಗಳಾಗಿ ಮಾರ್ಪಡುತ್ತವೆ.  ಇದರಿಂದ ಮಾದಕ ವಸ್ತುಗಳ ಸೇವನೆ ಮಾಡುವ ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ.  ಅಲ್ಲದೇ, ಆತನ ಕುಟುಂಬಕ್ಕೂ ಸಂಕಷ್ಟ ಎದುರಾಗುತ್ತದೆ.  ಹೀಗಾಗಿ ಇಂದಿನ ಯುವಕರು ಮಾದಕ ವಸ್ತುಗಳಿಂದ ದೂರ ಉಳಿಯಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಟ್ಟಣದ ಮುಖಂಡ ಶಿವುಪುತ್ರ ನಿರಾಳೆ ಮಾತನಾಡಿದರು.

ಈ ಜಾಥಾದಲ್ಲಿ ಪಿಎಸ್ಐ ಮುತ್ತು, ಎಎಸ್‌ಐ ಇಂಗಳೆ, ರವಿ ಡೊಣಗಿ ಮತ್ತು ಚಡಚಣ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌