ವಿಜಯಪುರ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯುಕ್ತರ ಬಲೆಗೆ ಸಿಲುಕಿದ ಘಟನೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ. ಬಿ. ಗ್ರಾಮದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿವಿ ಗ್ರಾಮದ ಗ್ರಾಮ ಪಂಚಾಯಿತಿಯ ಪಿಡಿಓ ಸಂಗಮೇಶ ಕುಂಬಾರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ಗ್ರಾಮದ ಖುಲ್ಲಾ ಜಾಗದ ವಾರಸಾ ಮಾಡಿಕೊಡಲು ರೂ. 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಂಗಮೇಶ ಕುಂಬಾರ ರೂ. 15 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ, ಇನ್ಸ್‌ಪೆಕ್ಟರ್ ಆನಂದ ಟಕ್ಕನ್ನವರ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಸಿಬ್ಬಂದಿಯಾದ ಸಂತೋಷ ಅಮರಖೇಡ, ಮಹೇಶ ಪೂಜಾರಿ, ಎ. ಕೆ. ಮುಲ್ಲಾ, ಗುರು ಹಡಪದ, ಶಂಕರ ಕಟೆ, ಈರಣ್ಣ ಕನ್ನೂರ, ಆನಂದ ಪಡಶೆಟ್ಟಿ, ಅಕ್ಬರ ಗೊಲಗೇರಿ, ಮದನಸಿಂಗ್ ರಜಪೂತ, ಮಾಳಪ್ಪ ಸಲಗೊಂಡ, ಸಂತೋಷ ಚವ್ಹಾಣ ಮತ್ತು ವಸೀಮ ಅಕ್ಕಲಕೋಟ ಪಾಲ್ಗೊಂಡಿದ್ದರು.