ವಿಜಯಪುರ ಜಿಲ್ಲೆಯ ಗಬಸಾವಳಗಿ ಬಳಿ ಹೊತ್ತಿ ಬೈಕಿಗೆ ಢಿಕ್ಕಿ ಹೊಡೆದು ಹೊತ್ತು ಉರಿದ ಸರಕಾರಿ ಬಸ್ಸು

ವಿಜಯಪುರ: ಬೈಕಿಗೆ ಢಿಕ್ಕಿ ಹೊಡೆದ ಸರಕಾರಿ ಬಸ್ಸೊಂದು ಹೊತ್ತು ಉರಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 52ರಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಮೊರಟಗಿಯಿಂದ ಸಿಂದಗಿಗೆ ಬರುತ್ತಿದ್ದ ಬಸ್ಸಿಗೆ ಸಿಂದಗಿಯಿಂದ ಮೊರಟಗಿಯತ್ತ ಹೊರಟಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತದ ಸಂಭವಿಸಿದೆ.  ಢಿಕ್ಕಿಯ ಬಳಿಕ ಬೈಕ್ ಬಸ್ಸಿನಡಿ ಸಿಲುಕಿದೆ.  ಆಗ ಹೊತ್ತಿದ ಬೆಂಕಿಯಿಂದಾಗಿ ಬಸ್ಸು ಸುಟ್ಟು ಭಸ್ಮವಾಗಿದೆ.  ಆದರೆ, ಅದೃಷ್ಟವಶಾತ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಅಪಘಾತದ ಬಳಿಕ ಹೊತ್ತಿ ಉರಿದ ಸರಕಾರಿ ಬಸ್ಸು

KA- 28/F- 2469 ನಂಬರಿನ ಸರಕಾರಿ ಬಸ್ಸು ಸುಟ್ಟು ಭಸ್ಮವಾಗಿದೆ.  ಘಟನೆಯ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.  ಆದರೆ, ಅಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟು ಕರಕಲಾಗಿದೆ.  ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.  ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ ಬಳಿಕ ವಾಹನ ಸಂಚಾರ ಪುನಾರಂಭವಾಗಿದೆ.

ಈ ಮಧ್ಯೆ ಬೆಂಕಿಗಾಹುತಿಯಾದ ಬಸ್ ನಲ್ಲಿದ್ದ ಪ್ರಯಾಣಿಕರು ಬೇರೆ ವಾಹನದಲ್ಲಿ ಪ್ರಯಾಣ ಬೆಳೆಸಿದ್ದಾರೆ.  ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

ಹೊಸ ಪೋಸ್ಟ್‌