ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಡಾ. ಎಂ. ಎಸ್. ಮದಭಾವಿ ಅವರಿಗೆ ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿಮಠ ಈ ವರ್ಷದ ಬಸವಭೂಷಣ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಉತ್ತರ ಕರ್ನಾಟಕದ ಗಡಿಯಲ್ಲಿರುವ ಶ್ರೀ ಮೋಟಗಿಮಠವು ಶತಮಾನಗಳಿಂದ ನಾಡು, ನುಡಿ, ಸಂಸ್ಕೃತಿ ಸಂವರ್ಧನೆಗಾಗಿ ಶ್ರಮಿಸುತ್ತ ಬಂದಿದೆ. ಪ್ರತಿವರ್ಷ ಶರಣಸಂಸ್ಕೃತಿ ಗಡಿನಾಡ ನುಡಿಹಬ್ಬ ಆಚರಿಸುವ ಈ ಮಠ ಗಡಿಯಲ್ಲಿ ಕನ್ನಡದ ಏಳಿಗೆಗಾಗಿ ಶ್ರಮಿಸುತ್ತಿದೆ. ಭಾಷಾ ಭಾವೈಕ್ಯತೆ, ಧರ್ಮ, ಸಮನ್ವಯತೆ, ಕನ್ನಡ ಜಾಗೃತಿಯ ಮೂಲಧ್ಯೇಯ ಹೊಂದಿದೆ.
ಜನೇವರಿ 24 ರಂದು ಬುಧವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಡಾ. ಎಂ. ಎಸ್. ಮದಭಾವಿ ಅವರಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ.
ಪ್ರಶಸ್ತಿಗೆ ಆಯ್ಕೆಯಾಗಿರುವ ಡಾ. ಎಂ. ಎಸ್. ಮದಭಾವಿ ಅವರಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದ ನಿರ್ದೇಶಕ ಕೃಷ್ಣ ಕೊಲ್ಹಾರಕುಲಕರ್ಣಿ, ವಿ. ಡಿ. ಐಹೊಳ್ಳಿ, ಎ. ಬಿ. ಬೂದಿಹಾಳ ಮತ್ತು ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ: