ಬಬಲೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ
ವಿಜಯಪುರ: ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಬಬಲೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶೀತಲ ಕಿಣಗಿ ಅವರು, ಎಲ್ಲ ಗರ್ಭಿಣಿ ಮಹಿಳೆಯರು ಎಚ್ಐವಿ, ಎಚ್‌ಬಿಎಸ್‌ಎಜಿ, ಸಿಫಿಲ್ಸ್ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಏಡ್ಸ್ ಪ್ರೇವೆನ್ಶನ್ ಸೊಸೈಟಿ ವತಿಯಿಂದ ಒಳ್ಳೆಯ ಕಾರ್ಯಕ್ರಮ ಮಾಡುತ್ತಿದ್ದಾರೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿಯೊಬ್ಬರಿಗೂ ಜನಜಾಗೃತಿ ಬಹಳ ಮುಖ್ಯವಾಗಿದೆ. ಆಶಾ ಕಾರ್ಯ ಕರ್ತೆಯರು ಮನೆ ಮನೆಗೆ ಹೋಗಿ ನಿರಂತರವಾಗಿ ಮಾಹಿತಿಯನ್ನೂ ನೀಡಬೇಕು. ಮೊದಲನೆಯ ತ್ರೈಮಾಸಿಕದಲ್ಲಿ […]
ಬೆಂಗಳೂರು ಜೈಲಿನಿಂದ ಬಿಡುಗಡೆಯಾಗಿ ಬಂದ ಕರವೇ ಮುಖಂಡರಿಗೆ ಗುಮ್ಮಟ ನಗರಿಯಲ್ಲಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ
ವಿಜಯಪುರ: ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ನಡೆದ ಹೋರಾಟದಲ್ಲಿ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ಜೊತೆ ಬಂಧಿತರಾಗಿ ಜೈಲು ಸೇರಿದ್ದ ವಿಜಯಪುರ ಜಿಲ್ಲಾಧ್ಯಕ್ಷ ಎಂ. ಸಿ. ಮುಲ್ಲಾ ಮತ್ತು ಉಪಾಧ್ಯಕ್ಷ ಮಹಾದೇವ ರಾವಜಿ ಅವರು ನಗರಕ್ಕೆ ಮರಳಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರಿದಂ ಅವರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಎಂ. […]
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಜವಾಬ್ದಾರಿಯಿಂದ […]