ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ, ವಹಿಸಿದ ಜವಾಬ್ದಾರಿ ಕೈಗೊಂಡು ಯಶಸ್ವಿಗೊಳಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ,ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಕ್ರಮವಹಿಸಬೇಕು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಉಪ ನಿರ್ದೇಶಕರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನೇವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಎಸ್ಪಿ ಋಷಿಕೇಶ ಸೋನಾವಣೆ ಭಗವಾನ ಮಾತನಾಡಿದರು

ವೇದಿಕೆ ಸಿದ್ಧತೆ,ಆಕರ್ಷಕ ಪಥಸಂಚಲನ, ಸನ್ಮಾನ,ಅಲ್ಫೋಪಹಾರ ವ್ಯವಸ್ಥೆ ಅಚ್ಚುಕಟ್ಟು ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಭದ್ರತಾ ವ್ಯವಸ್ಥೆ,ಕುಡಿಯುವ ನೀರು,ಸ್ವಚ್ಛತೆ, ದೀಪಾಲಂಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ನಿಗದಿತ ಸಮಯದಲ್ಲಿ ಎಲ್ಲ ಅಧಿಕಾರಿಗಳು ಹಾಜರಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ಅಂದು ಸಂಜೆ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿ, ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಸಂಬAಧಿಸಿದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದ ಅವರು, ಗಣರಾಜ್ಯೋತ್ಸವದ ಸಂದೇಶ ಸಿದ್ದತೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡುವಂತೆ ಸೂಚನೆ ನೀಡಿದರು.

ಎಸ್ಪಿ ಋಷಿಕೇಶ ಸೋನಾವಣೆ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಜಿ. ಪಂ. ಮುಖ್ಯ ಲೆಕ್ಕಪತ್ರಾಧಿಕಾರಿ ರಾಮಣ್ಣ ಅಥಣಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಮುಖಂಡರಾದ ಅಡಿವೆಪ್ಪ ಸಾಲಗಲ, ಭೀಮರಾಯ ಜಿಗಜಿಣಗಿ, ಅಭಿಷೇಕ ಚಕ್ರವರ್ತಿ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌