ವಿಜಯಪುರ ನಗರದ ಶ್ರೀ ಶಿವಾಜಿ ಮಹಾರಾಜ ಸೊಸಾಯಿಟಿಯಲ್ಲಿ ರಾಜಮಾತಾ ಜೀಜಾವು, ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ವಿಜಯಪುರ: ನಗರದ ಶ್ರೀ ಶಿವಾಜಿ ಮಹಾರಾಜ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಯಲ್ಲಿ ರಾಜಮಾತಾ ಜೀಜಾವು ಮತ್ತು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಪ್ರಾಧಾಪ್ಯಕ ಡಾ. ಸದಾಶಿವ ಪವಾರ, ರಾಜಮಾತಾ ಜೀಜಾವು ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರಿಗೆ ಬಾಲ್ಯದಿಂದಲೂ ಯುದ್ಧ ಕೌಶಲ್ಯಗಳು ಮತ್ತು ಹಿಂದು ಧರ್ಮದ ರಕ್ಷಣೆಯ ಕುರಿತು ನೀತಿ ಪಾಠಗಳನ್ನು ಹೇಳುತ್ತಿದ್ದರು. ಅವರ ಪಾಠಗಳ ಪ್ರೇರಣೆಯಿಂದಲೇ ಛತ್ರಪತಿ ಶಿವಾಜಿ ಮಹಾರಾಜರು ಹಿಂದು ಧರ್ಮಕ್ಕಾಗಿ ಶ್ರಮಿಸಿದರು ಎಂದು ಹೇಳಿದರು. ಸ್ವಾಮಿ ವಿವೇಕಾನಂದರು […]
ವಿಜಯಪುರ ಜಿಲ್ಲಾ ಮಟ್ಟದ ಥ್ರೊಬಾಲ್ ಚಾಂಪಿಯನ್ ಆದ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು- ರಾಜ್ಯ ಮಟ್ಟಕ್ಕೆ ಆಯ್ಕೆ
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಎಬಿವಿಪಿ ವಿಜಯಪುರ ಘಟಕ ಆಯೋಜಿಸಿದ್ದ ಜಿಲ್ಲಾ ಮಟ್ಟದ ಥ್ರೊಬಾಲ್ ವಿವೇಕ್ ಟ್ರೊಫಿ-2024 ಪಂದ್ಯಾವಳಿಯನ್ನು ಗೆದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಜ್ಞಾನ-ಶೀಲ-ಏಕತೆ ಸಾರಿದ ಸ್ವಾಮಿ ವಿವೇಕಾನಂದರ ಜಯಂತಿ ಸಾಕ್ಷೀಕರಿಸಲು ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವ ಪೀಳಿಗೆಯ ಸರ್ವಾಂಗೀಣ ಅಭಿವೃದ್ದಿಗಾಗಿ ಎಬಿವಿಪಿ ವಿಜಯಪುರ ಘಟಕ ಖೇಲೋ ಭಾರತ ಅಡಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಜನೇವರಿ 10 ರಂದು ಗುರುವಾರ ನಗರದ ಡಾ. ಬಿ.ಆರ್.ಅಂಬೇಡ್ಕರ […]
ಹಂಚನಾಳ ಕೆರೆ ಸೇರಿದಂತೆ ನಾನಾ ಸ್ಥಳಗಳಿಗೆ ಡಿಸಿ, ಪೌರಾಯುಕ್ತರ ಭೇಟಿ- ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹಂಚನಾಳ ಕೆರೆ ಸೇರಿದಂತೆ ವಿಜಯಪುರ ನಗರದ ನಾನಾ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆ ವ್ಯಾಪ್ತಿಯ ಇಂಡಿ ರಸ್ತೆಯಲ್ಲಿರುವ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಸ ಪ್ರತ್ಯೇಕಿಸುವ ಯಂತ್ರದ ಅಳವಡಿಕೆಯ ಯಂತ್ರದ ಅಳವಡಿಕೆ ಕೆಲಸವನ್ನು ಬೇಗನೆ ಪೂರ್ಣಗೊಳಿಸಬೇಕು. ಈ ಸ್ಥಳದಲ್ಲಿರುವ ಘನ ತ್ಯಾಜ್ಯವನ್ನು ಕೂಡಲೇ ವಿಲೇವಾರಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಸುತ್ತಮುತ್ತಲಿನ ಗಿಡ ಮರಗಳಿಗೆ ಬೇಸಿಗೆ […]