ಹಂಚನಾಳ ಕೆರೆ ಸೇರಿದಂತೆ ನಾನಾ ಸ್ಥಳಗಳಿಗೆ ಡಿಸಿ, ಪೌರಾಯುಕ್ತರ ಭೇಟಿ- ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹಂಚನಾಳ ಕೆರೆ ಸೇರಿದಂತೆ ವಿಜಯಪುರ ನಗರದ ನಾನಾ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯ ಇಂಡಿ ರಸ್ತೆಯಲ್ಲಿರುವ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಸ ಪ್ರತ್ಯೇಕಿಸುವ ಯಂತ್ರದ ಅಳವಡಿಕೆಯ ಯಂತ್ರದ ಅಳವಡಿಕೆ ಕೆಲಸವನ್ನು ಬೇಗನೆ ಪೂರ್ಣಗೊಳಿಸಬೇಕು.  ಈ ಸ್ಥಳದಲ್ಲಿರುವ ಘನ ತ್ಯಾಜ್ಯವನ್ನು ಕೂಡಲೇ ವಿಲೇವಾರಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು.  ಸುತ್ತಮುತ್ತಲಿನ ಗಿಡ ಮರಗಳಿಗೆ ಬೇಸಿಗೆ ಕಾಲದಲ್ಲಿ ಸರಿಯಾಗಿ ನೀರು ಪೂರೈಸಿ ಪರಿಸರ ಕಾಳಜಿ ವಹಿಸಬೇಕು ಎಂದು ಪಾಲಿಕೆ ಪರಿಸರ ಎಂಜಿನಿಯರ್ ಅಶೋಕ ಸಜ್ಜನ ಅವರಿಗೆ ಸೂಚನೆ ನೀಡಿದರು.

ವಿಜಯಪುರ ಡಿಸಿ ಟಿ. ಭೂಬಾಲನ್ ಅವರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಹಂಚನಾಳ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಹಂಚನಾಳ ತಾಂಡಾ ಹತ್ತಿರ ಇರುವ ಕೆರೆಗೆ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸೂಚಿಸಿದಂತೆ, ಕೆರೆಯ ನೀರಿಗೆ ಕೆಮಿಕಲ್ ಟ್ರೀಟ್‍ಮೆಂಟ್ ಮಾಡಬೇಕು ಮತ್ತು ಒಳಚರಂಡಿ ನೀರು ವೈಜ್ಞಾನಿಕವಾಗಿ ಸ್ವಚ್ಚಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ ಅವರಿಗೆ ಸೂಚನೆ ನೀಡಿದರು.

ಬರಟಗಿ ತಾಂಡಾ ಹತ್ತಿರ ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ ಅಡಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಪೂರ್ಣಗೊಂಡ ಕಟ್ಟಡಗಳಲ್ಲಿ ಬಾಕಿ ಇರುವ ದುರಸ್ತಿ ಕಾರ್ಯ ಮತ್ತು ಮೂಲಭೂತ ಸೌಲಭ್ಯಗಳನ್ನು ಆದ್ಯತೆಯ ಮೇಲೆ ನಿರ್ವಹಿಸಿ ಅವುಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ನಗರದ ಅಲ್ ಅಮಿನ್ ಕಾಲೇಜಿನ ಹತ್ತಿರ ಇರುವ ನಮೋ ನಗರದಲ್ಲಿ ನಿರ್ಮಾಣವಾಗುತ್ತಿರುವ ಗುಂಪು ಮನೆ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಮತ್ತು ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಅವರಿಗೆ ಸೂಚನೆ ನೀಡಿದರು.

ಅಥಣಿ ಸರ್ತೆಯಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬೇಗ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದ ಅವರು, ಕುಲಕರ್ಣಿ ಬಡಾವಣೆಗೆ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದಂತೆ ಬಡಾವಣೆ ವ್ಯವಸ್ಥೆಯನ್ನು ಪರಿಶೀಲಿಸಿದರು.  ನೀರೆತ್ತುವ ಮೋಟಾರ್‍ಗಳು ಹಾಳಾಗದಂತೆ ನೊಡಿಕೊಳ್ಳುವಂತೆ ಮಹಾನಗರ ಪಾಲಿಕೆಯ ಎಲೆಕ್ಚ್ರಿಕ್ ಎಂಜಿನಿಯರಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಿಕಿ, ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಂ. ಸಿ. ಡೊಳ್ಳಿ, ಅಸಿಸ್ಟಂಟ ಎಕ್ಸಿಕ್ಯೂಟಿವ್ ಎಂಜಿನಿಯರ್ ವಿ. ಎನ್. ನ್ಯಾಮಗೊಂಡ, ಅಸಿಸ್ಟಂಂಟ್ ಎಂಜಿನಿಯರ್ ಸುನೀಲ ಪಾಟೀಲ, ಸುನೀಲ, ಹಿರೆಣ್ಣಿ, ಅನೀಲ ರಾಠೋಡ ಹಾಗೂ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌