ವಿಜಯಪುರ: ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಶ್ಯಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ ಅಡುಗೆ ಕೋಣೆಯನ್ನು ವಿಜಯಪುರ ತಾ. ಪಂ. ಸಹಾಯಕ ನಿರ್ದೇಶಕ ಕಾಸಿಂಮಸಾಬ ಮಸಳಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮನರೇಗಾ ಯೋಜನೆಯು ಗ್ರಾಮೀಣ ಜನರಿಗೆ ರೂ. 316 ಕೂಲಿ ಜೊತೆಗೆ 100 ದಿನಗಳ ಉದ್ಯೋಗ ಖಾತರಿ ನೀಡುವವರ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಹ ನೆರವು ನೀಡುತ್ತಿದೆ. ಸರಕಾರಿ ಪ್ರಾರ್ಥಮಿಕ ಮತ್ತು ಪ್ರೌಢಶಾಲೆಗಳಲ್ಲು ಶಾಲಾ ಆಟದ ಮೈದಾನ, ಶೌಚಾಲಯ, ಕಂಪೌAಡ ಗೋಡೆ, ಅಡುಗೆ ಕೋಣೆಯಂತಹ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು, ಸದಸ್ಯರುಗಳು ಮತ್ತು ಶಾಲಾ ಶಿಕ್ಷಕರು ಸಮನ್ವಯತೆಯಿಂದ ಈ ಮೇಲಿನ ಕಾಮಗಾರಿಗಳನ್ನು ಪಡೆದುಕೊಂಡು ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಉಪಾಧ್ಯಕ್ಷ ಬಸಪ್ಪ ಹಳ್ಳಿ, ಗ್ರಾ. ಪಂ. ಪಿಡಿಓ ಬಿ. ಆರ್. ರಾಠೋಡ್, ತಾಲೂಕು ತಾಂತ್ರಿಕ ಸಂಯೋಜಕ ಪರಶುರಾಮ ಶಹಾಪುರ, ಐಇಸಿ ಸಂಯೋಜಕ ರಾಘವೇಂದ್ರ ಭಜಂತ್ರಿ ಸೇರಿದಂತೆ ಗ್ರಾ. ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.