ವಿಜಯಪುರ: ನಗರದ ವಿ. ಭ. ದರಬಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಪರಾಧ ವಿಭಾಗದ ಹೆಚ್ಚುವರಿ ಎಸ್ಪಿ ರಾಮನಗೌಡ ಎ. ಹಟ್ಟಿ ಮಾತನಾಡಿ, ಬಡವನಾಗಿ ಜನಿಸಿದರೂ ಬಡವನಾಗಿಯೇ ಸಾಯುವುದು ತಪ್ಪು. ಜೀವನದಲ್ಲಿ ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಪೂರಕವಾದ ಕೆಲಸಗಳನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿ ಬದುಕು ಸಾಗಿಸಬೇಕು ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಪನಿರ್ದೇಶಕ ಡಾ. ಸಿ. ಕೆ. ಹೊಸಮನಿ ಮಾತನಾಡಿ, ವಿದ್ಯಾರ್ಥಿಗಳು ಸತತ ಪ್ರಯತ್ನಗಳ ಮೂಲಕ ಉತ್ತಮ ಫಲಿತಾಂಶ ಪಡೆದು ಉನ್ನತ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಟಿ. ಆರ್. ಕುಲಕರ್ಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಯುವ ಸದಸ್ಯ ವಿಶಾಲ ಕೆ. ದರಬಾರ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ನಾನಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಬದುಕು ಮತ್ತು ಸಾಧನೆ ಕುರಿತು ಡಾ. ಅಂಬೇಡ್ಕರ್ ಓದು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಸಮನ್ವಯಾಧಿಕಾರಿ ಡಾ. ವಿನಾಯಕ ಬಿ. ಗ್ರಾಮಪುರೋಹಿತ, ದೈಹಿಕ ಉಪನ್ಯಾಸಕ ಗಣೇಶ ವೈ. ಎಚ್. ಉಪನ್ಯಾಸಕ ನಾಗರಾಜ ಎ., ಉಪನ್ಯಾಸಕರಾದ ಎಸ್. ಎಸ್. ಗೌರಿ, ನಾಗರಾಜ ಎ., ಬಿ. ಎಚ್. ಕುಲಕರ್ಣಿ, ಕೆ. ಡಿ. ಚವ್ಹಾಣ, ಆನಂದ ಸಂಗೋಗಿ, ವಿದ್ಯಾರ್ಥಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕುಮಾರ ಸೋಮನಾಥ ಸಾಲೋಟಗಿ ಮುಂತಾದವರು ಉಪಸ್ಥಿತರಿದ್ದರು.
ಎ. ಎಸ್. ಕುಲಕರ್ಣಿ ವಾರ್ಷಿಕ ವರದಿ ವಾಚಿಸಿದರು. ಸಂಜೀವ ಪಿ. ಕುಲಕರ್ಣಿ ಕ್ರೀಡಾ ವರದಿ ಓದಿದರು. ಉಪನ್ಯಾಸಕರಾದ ಡಾ. ವೇದನಿಧಿಆಚಾರ್ಯ ಬಿ. ಕುಲಕರ್ಣಿ ನಿರೂಪಿಸಿದದರು. ಗುರುರಾಜ. ಬಿ. ಕುಲಕರ್ಣಿ ಪರಿಚಯಸಿ ವಂದಿಸಿದರು.