ಅಯೋಧ್ಯೆ ಸಂಭ್ರಮೋತ್ಸವ: ಜೆಎಸ್ಎಸ್ ಆಸ್ಪತ್ರೆಯಲ್ಲಿ ಜ. 18 ರಿಂದ 22ರ ವರೆಗೆ ಉಚಿತ ಹೆರಿಗೆ ಸೌಲಭ್ಯ
ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ನೇತೃತ್ವದ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ನಿರ್ಮಿತ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನೇವರಿ 18 ರಿಂದ ಜನೇವರಿ 22ರ ವರೆಗೆ ಐದು ದಿನಗಳ ಕಾಲ ಹೆರಿಗೆ ಮಾಡಿಸಿಕೊಳ್ಳುವ ಮಹಿಳೆಯರಿಗೆ ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಹೆರಿಗೆ ಆರೋಗ್ಯ ಸೇವೆ ಸಿಗಲಿದೆ. ಜನೇವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಅಯೋಧ್ಯಾ […]
ಸಂಚಾರಿ ನಿಯಮ ಪಾಲನೆ, ಜಾಗರೂಕತೆಯಿಂದ ವಾಹನ ಚಾಲನೆಯಿಂದ ರಸ್ತೆ ಅಪಘಾತ ತಪ್ಪಿಸಬಹುದು- ಬಸವರಾಜ ಯಲಿಗಾರ
ವಿಜಯಪುರ: ಸಂಚಾರಿ ನಿಯಮಗಳ ಪಾಲನೆ ಮತ್ತು ಜಾಗರೂಕತೆಯಿಂದ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಹಾಗೂ ಜೀವಹಾನಿ ತಡೆಯಲು ಸಾಧ್ಯ ಎಂದು ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ಹೇಳಿದ್ದಾರೆ. ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್ ನಲ್ಲಿ ವಿವಿಯ ಐಕ್ಯೂಎಸಿ ವಿಭಾಗದ ವತಿಯಿಂದ ಇಂದು ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರಸ್ತೆ ಅಪಘಾತಗಳು ಮತ್ತು ಅವುಗಳಿಗೆ ಕಾರಣಗಳ ಕುರಿತು ಎಳೆಎಳೆಯಾಗಿ ಮಾಹಿತಿ ನೀಡಿದ […]
ಬಿಜೆಪಿ ಎಂಪಿ ಟಿಕೆಟ್ ನನಗೆ ಸಿಗಲಿದೆ- ಎಂಎಲ್ಎ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದೆ- ಮಹೇಂದ್ರಕುಮಾರ ನಾಯಕ
ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಸಿಗಲಿದೆ ಎಂದು ಶೇ. 200ರಷ್ಟು ವಿಶ್ವಾಸವಿದೆ ಎಂದು ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದ ಮಹೇಂದ್ರಕುಮಾರ ನಾಯಕ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದೆ. ಆದರೆ, ಕಾಣದ ಕೈಗಳ ಕುತಂತ್ರದಿಂದ ಕಳೆದ ಬಾರಿ ನಾಗಠಾಣ ಟಿಕೇಟ್ ತಪ್ಪಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ […]
ನಾಗರಾಳೆ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ- ಎಡಿಸಿ ಮಹಾದೇವ ಮುರಗಿ
ವಿಜಯಪುರ: ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ. ಇಂಥ ಪರಿಸ್ಥಿತಿಯಲ್ಲಿ ನಾಗರಾಳೆ ಪಬ್ಲಿಕ್ ಸ್ಕೂಲ್ ಕಳೆದ 23 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು. ನಗರದ ಗಚ್ಚಿನಕಟ್ಟಿ ಕಾಲನಿಯಲ್ಲಿರುವ ನಾಗರಾಳೆ ಪಬ್ಲಿಕ್ ಶಾಲೆಯ 23ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲೆಯ ವಿದ್ಯಾರ್ಥಿಗಳ ಬಗ್ಗೆ ಪ್ರತಿ ತಿಂಗಳು ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ. […]
ತುಷಾರ ಚಲನಚಿತ್ರಕ್ಕೆ ಸಿದ್ಧನಕೊಳ್ಳದಲ್ಲಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಸಿದ್ದನಕೊಳ್ಳದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ನಡೆದ 2024 ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ ವಿಶ್ವಪ್ರಕಾಶ ಟಿ. ಮಲಗೊಂಡ ನಟಿಸಿರುವ ತುಷಾರ ಚಲನಚಿತ್ರಕ್ಕೆ ಹಿರಿಯ ನಿರ್ದೇಶಕರು, ಕಲಾವಿದರು ಮತ್ತು ಆಯ್ಕೆದಾರರ ಸಮಿತಿ ಮೆಚ್ಚುಗೆ ಪ್ರಶಸ್ತಿ ಲಭಿಸಿದೆ. ರಾಜ್ಯದ ನಾನಾ ಗಡೆಗಳಿಂದ ನೂರಾರು ಚಲನಚಿತ್ರಗಳು ಆಯ್ಕೆಗೆ ಅರ್ಜಿ ಸಲ್ಲಿಸಿದ್ದವು. ಈ ವೇಳೆ ಮಲಗೊಂಡ ಫಿಲಂ ಪ್ರೊಡಕ್ಷನ್ ನಡಿ ತಯಾರಾದ ತುಷಾರ್ ವನ್ನೂ ಕಳುಹಿಸಲಾಗಿತ್ತು. ಈ ಸಿನೇಮಾ ವೀಕ್ಷಿಸಿದ ಹಿರಿಯ […]
ಅನುಭಾವಿ ಕವಿ ಫಾರೂಖಿ ಅವರ ಕವನ ಸಂಕಲನ ಬಿಡುಗಡೆ
ವಿಜಯಪುರ: ವಿಜಯಪುರದ ಇತಿಹಾಸದಲ್ಲಿ ಅಚ್ಬಳಿಯದ ನೆನಪು ಉಳಿಸಿದ ಬ್ರಿಟಿಷ್ ವಾಯುದಳ (ಆರ್‌ಎಎಫ್)ದ ಅಧಿಕಾರಿಯಾಗಿದ್ದ ದಿ. ಅನ್ವರ ಹುಸೇನ ಫಾರೂಖಿ ಅವರ ಅಪ್ರಕಟಿತ ಇಂಗ್ಲೀಷ ಕವನಗಳ ಸಂಗ್ರಹ ವಾಯ್ಸ್ ಫ್ರಾಮ್ ಹೆವನ್ ಬಿಡುಡಗೆ ಸಮಾರಂಭ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಖ್ಯಾತ ಕವಿ, ಲೇಖಕ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕವಿ ಡಾ. ಮಾಹಿರ್ ಮನ್ಸೂರ್, ದಿ. ಅನ್ವರ್ ಹುಸೇನ್ ಫಾರೂಖಿ ಅವರ ಕವಿತೆಗಳಲ್ಲಿ ಶರಣರ, ಸರ್ವಜ್ಞನ ಅನುಭವ ಹಾಗೂ […]
2024 ಮತ್ತೊಮ್ಮೆ ಮೋದಿ: ವಿಜಯಪುರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗೋಡೆ ಬರಹಕ್ಕೆ ಚಾಲನೆ
ವಿಜಯಪುರ: 2024 ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ರೂಪಿಸಿರುವ ಈ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶ ಇನ್ನಷ್ಟೂ ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕು. ಭಾರತವನ್ನು […]