ನಾಗರಾಳೆ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ- ಎಡಿಸಿ ಮಹಾದೇವ ಮುರಗಿ

ವಿಜಯಪುರ: ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ.  ಇಂಥ ಪರಿಸ್ಥಿತಿಯಲ್ಲಿ ನಾಗರಾಳೆ ಪಬ್ಲಿಕ್ ಸ್ಕೂಲ್ ಕಳೆದ 23 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

ನಗರದ ಗಚ್ಚಿನಕಟ್ಟಿ ಕಾಲನಿಯಲ್ಲಿರುವ ನಾಗರಾಳೆ ಪಬ್ಲಿಕ್ ಶಾಲೆಯ 23ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆಯ ವಿದ್ಯಾರ್ಥಿಗಳ ಬಗ್ಗೆ ಪ್ರತಿ ತಿಂಗಳು ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ.  ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಸತತ ಮೂರು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 100 ಫಲಿತಾಂಶವನ್ನು ನೀಡುವುದರ ಮೂಲಕ ಒಳ್ಳೆಯ ಗುಣಮಟ್ಟದ ಶಿಕ್ದಣ ಸಂಸ್ಥೆಯಾಗಿ ಹೊರಹೊಮ್ಮುತ್ತಿದ್ದು ಶ್ಲಾಘನೀಯ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಕಾರ್ಮಿಕರ ಮತ್ತು ಬಡ ರೋಗಿಗಳ ಕಲ್ಯಾಣ ಪರಿಷತ್(ಎನ್.ಜಿ) ಅಧ್ಯಕ್ಷ ಅಶೋಕ ಜುಗತಿ ಮಾತನಾಡಿ, ಇಂದಿನ ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೇವಲ ಫೇಸಬುಕ್, ವಾಟ್ಸಲ್, ಟಿವಿ ಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ.  ಇದನ್ನು ಬಿಟ್ಟು ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಗಮನ ಹರಿಸಬೇಕು.  ಪೋಷಕರೂ ತಮ್ಮ ಮಕ್ಕಳ ಬಗ್ಗೆ ನಿಗಾ ಇಡಬೇಕು.  ಶಾಲೆಯಲ್ಲಿ ಕಲಿಸುವ ಪಾಠಗಳನ್ನು ತಮ್ಮ ಮಕ್ಕಳು ಗಮನ ಹರಿಸುವ ಕುರಿತು ಶಿಕ್ಷಕರ ಜೊತೆ ಚರ್ಚಿಸಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಗಮನ ನೀಡಬೇಕು ಎಂದು ಹೇಳಿದರು.

ಶಾಲೆಯ ಅಧ್ಯಕ್ಷ ಎಸ್.ಬಿ. ನಾಗರಾಳೆ ಮಾತನಾಡಿದರು.  ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ತನುಜಾ ನಾಗರಾಳೆ, ಶಿಕ್ಷಕಿಯರಾದ ನೇಹಾ ಚೌಗುಲೆ, ಅಶ್ವಿನಿ ಪಟ್ಟಣಶೆಟ್ಟಿ, ಸೌಜನ್ಯ ನಾಲವಾರ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ಪೋಷಕರು ಉಪಸ್ಥಿತರಿದ್ದರು.

ಉದ್ಘಾಟನೆ ಕಾರ್ಯಕ್ರಮದ ಬಳಿಕ ಶಾಲೆಯ ಮಕ್ಕಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Leave a Reply

ಹೊಸ ಪೋಸ್ಟ್‌