1857ರ ಸ್ವಾತಂತ್ರ್ಯ ಸಂಗ್ರಾಮ ರಾಷ್ಟ್ರೀಯತೆ ಬೆಳೆಯಲು ಕಾರಣ- ಶಂಕರಗೌಡ ಸೋಮನಾಳ

ವಿಜಯಪುರ: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ರಾಷ್ಟ್ರೀಯತೆ ಬೆಳೆಯಲು ಹಾಗೂ ಸ್ವಾತಂತ್ರ್ಯ ಚಳವಳಿಯಿಂದ ಭಾರತೀಯ ಜನರಲ್ಲಿ ರಾಷ್ಟ್ರೀಯತೆಯ ಮನೋಭಾವ ಬರಲು ಕಾರಣವಾಯಿತು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಐಕ್ಯೂಎಸಿ ಸಹಯೋಗದೊಂದಿಗೆ ಇತಿಹಾಸ ವಿಭಾಗದಲ್ಲಿ ಜರುಗಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಅಮೋಘವಾಗಿದ್ದು, 1857ರ ಪ್ರಥಮ ಸ್ವಾತಂತ್ರö್ಯ ಸಂಗ್ರಾಮವು ಪ್ರೇರಣೆಯಾಗಿದೆ. ವಿದ್ಯಾರ್ಥಿಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಯ ದೃಷ್ಟಿಕೋನದಿಂದಲೂ ಆಧುನಿಕ ಭಾರತದ […]

ನೋಡಲ್ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ ಜಿಲ್ಲೆಯಲ್ಲಿ ಜನವರಿ 26 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿರುವ ಸ್ತಬ್ಧಚಿತ್ರ ವಾಹನಕ್ಕೆ ಮಾರ್ಗನಕ್ಷೆ (ರೂಟ್ ಮ್ಯಾಪ್) ಸಿದ್ಧಪಡಿಸಲಾಗಿದ್ದು, ಮಾರ್ಗನಕ್ಷೆಯಂತೆ ಸ್ತಬ್ಧಚಿತ್ರ ವಾಹನ ಸಂಚರಿಸಲು ಎಲ್ಲ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನ ಜಾಗೃತಿ ಜಾಥಾದ […]