1857ರ ಸ್ವಾತಂತ್ರ್ಯ ಸಂಗ್ರಾಮ ರಾಷ್ಟ್ರೀಯತೆ ಬೆಳೆಯಲು ಕಾರಣ- ಶಂಕರಗೌಡ ಸೋಮನಾಳ

ವಿಜಯಪುರ: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ರಾಷ್ಟ್ರೀಯತೆ ಬೆಳೆಯಲು ಹಾಗೂ ಸ್ವಾತಂತ್ರ್ಯ ಚಳವಳಿಯಿಂದ ಭಾರತೀಯ ಜನರಲ್ಲಿ ರಾಷ್ಟ್ರೀಯತೆಯ ಮನೋಭಾವ ಬರಲು ಕಾರಣವಾಯಿತು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಐಕ್ಯೂಎಸಿ ಸಹಯೋಗದೊಂದಿಗೆ ಇತಿಹಾಸ ವಿಭಾಗದಲ್ಲಿ ಜರುಗಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಅಮೋಘವಾಗಿದ್ದು, 1857ರ ಪ್ರಥಮ ಸ್ವಾತಂತ್ರö್ಯ ಸಂಗ್ರಾಮವು ಪ್ರೇರಣೆಯಾಗಿದೆ. ವಿದ್ಯಾರ್ಥಿಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಯ ದೃಷ್ಟಿಕೋನದಿಂದಲೂ ಆಧುನಿಕ ಭಾರತದ ಇತಿಹಾಸವು ಬಹಳ ಪ್ರಮುಖವಾಗಿದೆ ಎಂದು ಹೇಳುವ ಮೂಲಕ ಇಂದಿನ ವಿದ್ಯಾರ್ಥಿಗಳಿಗೆ ಇತಿಹಾಸದ ಅವಶ್ಯಕತೆಯನ್ನು ಅವರು ಮನಗಾಣಿಸಿದರು.

ಈ ಕಾರ್ಯಕ್ರಮದಲ್ಲಿ ಡಾ. ಚಂದ್ರಕಲಾ ಸಿ. ಹಳ್ಳಿ, ಗುರುರಾಜ ಬಮ್ಮನಹಳ್ಳಿ, ಅಶೋಕ ಈ. ಮಲಾಬದಿ ಹಾಗೂ ಇತಿಹಾಸ ವಿಭಾಗದ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ವಿಭಾಗದ ಸಂಯೋಜಕ ಡಾ. ಸುರೇಶ ಕೆ. ಪಿ. ಉಪಸ್ಥಿತರಿದ್ದರು.

ಇತಿಹಾಸ ವಿಭಾಗದ ಉಪನ್ಯಾಸಕ ಡಾ. ಎಂ. ಎಸ್. ಮುಜಾವರ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌