ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ- ಬಸವ ನಾಡಿನಲ್ಲಿ ಝಗಮಗಿಸುತ್ತಿರುವ ರಸ್ತೆಗಳು, ದೇವಸ್ಥಾನಗಳು
ವಿಜಯಪುರ: ಬಹು ನಿರೀಕ್ಷಿತ ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಸವನಾಡು ವಿಜಯಪುರ ಜಿಲ್ಲೆಯಲ್ಲಿಯೂ ಸಂಭ್ರಮದ ವಾತಾವರಣ ಮನೆ ಮಾಡಿದೆ. ಜನೇವರಿ 22 ರಂದು ಸೋಮವಾರ ಗುಮ್ಮಟ ನಗರಿ ವಿಜಯಪುರದಲ್ಲಿ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರಗಳು ಕಣ್ಮನ ಸೆಳೆಯುತ್ತಿವೆ. ನಗರ ಕಲರ್‌ಪುಲ್ ಲೈಟಿಂಗ್ ಮೂಲಕ ಜಗಮಗಿಸುತ್ತಿದೆ. ನಗರದ ಶಿವಾಜಿ ವೃತ್ತದಲ್ಲಿ ಕೇಸರಿ ಬಾವುಟಗಳನ್ನು ಕಟ್ಟಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಗಾಂಧಿಚೌಕ್, ಬಸವೇಶ್ವರ ಚೌಕ್ ಮತ್ತು ಅಂಬೇಡ್ಕರ್ ಚೌಕ್ ಗಳಲ್ಲಿಯೂ ವಿದ್ಯುತ್ ದೀಪಾಲಂಕಾರ […]
ಅಂಬಿಗರ ಚೌಡಯ್ಯ ಶ್ರೇಷ್ಠ ತತ್ವಜ್ಞಾನಿ, ವಚನಕಾರರು- ಜಿಲ್ಲಾಧಿಕಾರಿ ಟಿ. ಭೂಬಾಲನ್
ವಿಜಯಪುರ: ಬಸವಾದಿ ಶರಣರ ಸಮಕಾಲಿನ ಶರಣರಾದ ಅಂಬಿಗರ ಚೌಡಯ್ಯನವರು ಅಂದಿನ ಸಮಾಜದಲ್ಲಿನ ಮೌಢ್ಯಗಳ ನಿರ್ಮೂಲನೆಗಾಗಿ ಶ್ರಮಿಸಿದವರು. ಮಹಿಳೆಯರು ಮತ್ತು ಪುರುಷ ಸಮಾನರೆಂದು ಪ್ರತಿಪಾದಿಸಿದ ತತ್ವನಿಷ್ಟ ಶ್ರೇಷ್ಟ ತತ್ವಜ್ಞಾನಿ, ವಚನಕಾರರಾಗಿದ್ದರು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಾಯಕ ದಾಸೋಹ,ಶಿವಯೋಗ ಸಾಧನೆಯ ಮೂಲಕ […]
ವಿಜಯಪುರದಲ್ಲಿ ಕಾಂಗ್ರೆಸ್ಸಿನ ಕಟ್ಟಡ, ಕಟ್ಟಿಗೆ ಕಾರ್ಕಮಿಕರ ಸಂಘಟನೆ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದ ಪ್ರೊ. ರಾಜು ಆಲಗೂರ
ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಟ್ಟಡ ಕಾರ್ಮಿಕರ ಹಾಗೂ ಕಟ್ಟಿಗೆ ಕಾರ್ಮಿಕರ ಕಾಂಗ್ರೆಸ್ ಸಂಘಟನೆ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಮತ್ತು ಲೋಕಸಭಾ ಚುನಾವಣೆ ಪೂರ್ವ ತಯಾರಿ ಕುರಿತು ಚರ್ಚಿಸಲು ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನಸ್ಚ್ರಕ್ಷನ್ ಫಾರೆಸ್ಟ ಆಂಡ್ ವುಡ್ ವರ್ಕಸ್ ಫೆಡರೇಶನ್ ರಾಜ್ಯ ಅಧ್ಯಕ್ಷ ಜಿ. ಆರ್. ದಿನೇಶ, ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾರ್ಮಿಕರ ಸಲುವಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, […]
ರೈತರು ಇಸ್ರೆಲ್ ಮಾದರಿಯ ಕೃಷಿ ಅಳವಡಿಸಿಕೊಂಡರೆ ಹೆಚ್ಚಿನ ಆದಾಯ ಸಾಧ್ಯ- ಶಾಸಕ ರಾಜುಗೌಡ ಪಾಟೀಲ
ವಿಜಯಪುರ: ರೈತರು ಇಸ್ರೇಲ್ ಮಾದರಿಯಲ್ಲಿ ಕೃಷಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ನೀರಿನ ಸದ್ಭಳಕೆಯೊಂದಿಗೆ ಉತ್ತಮ ಇಳುವರಿ ಪಡೆದು ಕೃಷಿಯನ್ನು ಲಾಭದಾಯಕವಾಗಿ ಮಾಡಿಕೊಳ್ಳಬೇಕು ಎಂದು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ವಿಜಯಪುರ ಕೃಷಿ ಮಹಾವಿದ್ಯಾಲಯ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಕೃಷಿ ಮೇಳ-2023-24ರ ಸುಸ್ಥಿರ ಕೃಷಿಗಾಗಿ ಬರ ನಿರ್ವಹಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಸ್ರೇಲ್ ಕೃಷಿ ಮಾದರಿ ಪದ್ಧತಿ ಅಳವಡಿಸಿಕೊಳ್ಳಬೇಕು. ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು. […]
ಬಡವರು, ದೀನದಲೀತರು, ಕಾರ್ಮಿಕರು, ಅಲ್ಪಸಂಖ್ಯಾತರು, ಹಿಂದುಳಿದವರ ಏಳಿಗೆಗಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ- ಅಭಿಷೇಕ ದತ್ತ
ವಿಜಯಪುರ: ಕಾಂಗ್ರೆಸ್ ಪಕ್ಷ ಬಡವರು, ರೈತರು, ಕಾರ್ಮಿಕರು, ದೀನದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸೇರಿದಂತೆ ಎಲ್ಲ ರಂಗಗಳಲ್ಲಿ ಏಳಿಗೆಯಾಗಲು ಶ್ರಮಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ ದತ್ತ ಹೇಳಿದ್ದಾರೆ. ವಿಜಯಪುರದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಅವರು, ಮುಂಬರುವ ಲೋಕಸಭೆ ಚುನಾವಣೆ ಮತ್ತು ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ನಿಗಮ ಮಂಡಳಿಗಳಲ್ಲಿ ನೇಮಕದ ಕುರಿತು ಮತ್ತು ಕೆಪಿಸಿಸಿ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾದ ರೀತಿಯಲ್ಲಿ ಮುಟ್ಟಿಸುವ ಕುರಿತು ಕಾಂಗ್ರೆಸ್ […]
ಎತ್ತುಗಳ ಸಂರಕ್ಷಣೆ ಜನಜಾಗೃತಿಗಾಗಿ ಅಭಿ ಫೌಂಡೇಶನ್ ವತಿಯಿಂದ ನಂದಿಯಾತ್ರೆ
ವಿಜಯಪುರ: ಎತ್ತುಗಳು ಕೃಷಿಕರಿಗೆ ಕುಟುಂಬ ಸದಸ್ಯರಿದ್ದಂತೆ. ಆದರೆ, ಅತ್ಯಾಧುನಿಕ ತಂತ್ರಜ್ಞಾನ ಮತ್ತು ಇತರ ಕಾರಣಗಳಿಂದಾಗಿ ಎತ್ತುಗಳ ಜಾಗದಲ್ಲಿ ಯಂತ್ರೋಪಕರಣಗಳು ಅವರಿಸುತ್ತಿವೆ. ಇದರಿಂದ ಎತ್ತುಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಇದು ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿ ಅಭಿ ಫೌಂಡೆಶನ್ ವತಿಯಿಂದ ಎತ್ತುಗಳ ಸಂರಕ್ಷಣೆಯ ಮಹತ್ವ ತಿಳಿಸಲು ನಂದಿಯಾತ್ರೆ ಕಾರ್ಯಕ್ರಮ ನಡೆಯುತ್ತಿದೆ. ಗ್ರಾಮದ ಎತ್ತು ಸಾಕಾಣಿಕೆದಾರರ ನೇತೃತ್ವದಲ್ಲಿ ಜೋಡೆತ್ತಿನ ಬಂಡೆಯ ಮೇಲೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ […]
ವಿಜಯಪುರ- ತಿರುಪತಿ ರೈಲು ಸೇವೆ ಪ್ರಾರಂಭಿಸಿ- ಸಂಸದ ರಮೇಶ ಜಿಗಜಿಣಗಿ ಅವರಿಂದ ರೇಲ್ವೆ ಇಲಾಖೆ ಜಿಎಂ ಗೆ ಪತ್ರ
ವಿಜಯಪುರ: ವಿಜಯಪುರದಿಂದ ತಿರುಪತಿಗೆ ನೇರ ರೈಲು ಸಂಚಾರ ಆರಂಭಿಸುವxತೆ ಸಂಸದ ರಮೇಶ ಜಿಗಜಿಣಗಿ ಅವರು ಹುಬ್ಬಳ್ಳಿ ರೇಲ್ವೆ ಜನರಲ್ ಮ್ಯಾನೇಜರ್ ಗೆ ಪತ್ರ ಬರೆದಿದ್ದಾರೆ. ಜಿಲ್ಲೆಯ ಜನತೆ ವಿಜಯಪುರದಿಂದ ತಿರುಪತಿಯ ಮದ್ಯೆ ರೈಲುಸೇವೆ ಪ್ರಾರಂಭಿಸುವಂತೆ ಬಹುದಿನಗಳಿಂದ ಮನವಿ ಮಾಡುತ್ತಿದ್ದಾರೆ. ಈ ಕುರಿತು ಈಗಾಗಲೇ ಕೇಂದ್ರ ರೇಲ್ವೆ ಸಚಿವರೊಂದಿಗೂ ಚರ್ಚೆ ನಡೆಸಲಾಗಿದೆ. ಈ ಭಾಗದಿಂದ ತಿರುಪತಿಗೆ ನೇರ ರೈಲು ಸೇವ ಇಲ್ಲದ ಕಾರಣ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ವಿಜಯಪುರ- ತಿರುಪತಿ ಮಧ್ಯೆ ರೈಲು ಸಂಚಾರ ಪ್ರಾರಂಭಿಸಿ […]