ವಿಜಯಪುರದಲ್ಲಿ ಕಾಂಗ್ರೆಸ್ಸಿನ ಕಟ್ಟಡ, ಕಟ್ಟಿಗೆ ಕಾರ್ಕಮಿಕರ ಸಂಘಟನೆ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದ ಪ್ರೊ. ರಾಜು ಆಲಗೂರ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಟ್ಟಡ ಕಾರ್ಮಿಕರ ಹಾಗೂ ಕಟ್ಟಿಗೆ ಕಾರ್ಮಿಕರ ಕಾಂಗ್ರೆಸ್ ಸಂಘಟನೆ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಮತ್ತು ಲೋಕಸಭಾ ಚುನಾವಣೆ ಪೂರ್ವ ತಯಾರಿ ಕುರಿತು ಚರ್ಚಿಸಲು ಸಭೆ ನಡೆಯಿತು.

ಈ ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಇಂಡಿಯನ್ ನ್ಯಾಷನಲ್ ಬಿಲ್ಡಿಂಗ್ ಕನಸ್ಚ್ರಕ್ಷನ್ ಫಾರೆಸ್ಟ ಆಂಡ್ ವುಡ್ ವರ್ಕಸ್ ಫೆಡರೇಶನ್ ರಾಜ್ಯ ಅಧ್ಯಕ್ಷ ಜಿ. ಆರ್. ದಿನೇಶ, ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾರ್ಮಿಕರ ಸಲುವಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದರ ಜೊತೆಗೆ ಐದು ಗ್ಯಾರಂಟಿ ಯೋಜನೆಗಳನ್ನೂ ಜಾರಿಗೆ ತಂದಿರುವುದು ಸಮಾಜದ ನಾನಾ ವರ್ಗಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ತಿಳಿಸಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ರಾಜು ಆಲಗೂರ ಮಾತನಾಡಿದರು

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸಂಸದರನ್ನು ಆಯ್ಕೆ ಮಾಡಲು ಕಾರ್ಮಿಕರ ವರ್ಗ ಹಾಗೂ ಅಹಿಂದ ವರ್ಗ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಮಿಕ ಮುಖಂಡ ಅಕ್ರಮ ಮಾಶಾಳಕರ ಮಾತನಾಡಿ ಒಗ್ಗಟ್ಟಿನಿಲ್ಲಿ ಬಲವಿದೆ ಎಂದು ಹೇಳಿದರು

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸೋಮನಾಥ ಕಳ್ಳಿಮನಿ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ 16 ಬ್ಲಾಕ್ ಅಧ್ಯಕ್ಷರಿಗೆ ಹಾಗೂ ಜಿಲ್ಲಾ ಘಟಕದ ನಾನಾ ಪದಾಧಿಕಾರಿಗಳ ಆದೇಶ ಪತ್ರ ನೀಡಲಾಯಿತು.  ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಸದಸ್ಯ ಜಕ್ಕಪ್ಪ ಎಡವೆ, ಸಂಘಟನೆ ಉಪಾಧ್ಯಕ್ಷ ಮುನಿರಾಜು ವೆಂಕಟೇಶ, ಮುಖಂಡರಾದ ನಳಿನ ದಾಮೋದರ, ಅಕ್ರಮ ಪಾಷಾ, ಜ್ಯೋತಿ, ಹರೀಶ ಕೌಲಗಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಜಿ. ಎಸ್. ಕಾಮನಕೆರೆ, ತಿಕೋಟಾ ಬ್ಲಾಕ್ ಸೇವಾದಳ ಅಧ್ಯಕ್ಷ ಶಿವಾನಂದ ಹಂಜಗಿ ಮುಂತಾದವರು ಉಪಸ್ಥಿತರಿರು.

ಸತೀಶಕುಮಾರ ಅಡವಿ ನಿರೂಪಿಸಿದರು, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಬೀರಪ್ಪ ಜುಮನಾಳ ಸ್ವಾಗತಿಸಿದರು.  ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಯ ಮಹಿಳಾ ಘಟಕದ ಅಧ್ಯಕ್ಷೆ ಸುನಂದಾ ಸೋನಹಳ್ಳಿ ವಂದಿಸಿದರು.

Leave a Reply

ಹೊಸ ಪೋಸ್ಟ್‌