ವಿಜಯಪುರ: ಕಾಂಗ್ರೆಸ್ ಪಕ್ಷ ಬಡವರು, ರೈತರು, ಕಾರ್ಮಿಕರು, ದೀನದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸೇರಿದಂತೆ ಎಲ್ಲ ರಂಗಗಳಲ್ಲಿ ಏಳಿಗೆಯಾಗಲು ಶ್ರಮಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ ದತ್ತ ಹೇಳಿದ್ದಾರೆ.
ವಿಜಯಪುರದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಅವರು, ಮುಂಬರುವ ಲೋಕಸಭೆ ಚುನಾವಣೆ ಮತ್ತು ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ನಿಗಮ ಮಂಡಳಿಗಳಲ್ಲಿ ನೇಮಕದ ಕುರಿತು ಮತ್ತು ಕೆಪಿಸಿಸಿ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾದ ರೀತಿಯಲ್ಲಿ ಮುಟ್ಟಿಸುವ ಕುರಿತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ. ಬಿಜೆಪಿಯವರು ಸುಳ್ಳು, ದ್ವೇಷ ಹಾಗೂ ಭ್ರಷ್ಟಾಚಾರಗಳಲ್ಲಿ ತೊಡಗಿದ್ದು, ಇದನ್ನು ಇಡೀ ದೇಶದ ಜನ ಗಮನಿಸುತ್ತಿದ್ದಾರೆ. ಅಲ್ಲದೇ, ಕಾಂಗ್ರೆಸ್ ಪಕ್ಷವನ್ನು ಒಂದು ಆಶಾಕಿರಣವಾಗಿ ನೋಡುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಸರಕಾರ ರಚಿಸಲಿದ್ದು, ಸರ್ವರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ಕೈಯನ್ನು ಬಲಪಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರೊ. ರಾಜು ಆಲಗೂರ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ ಮುಷ್ರಿಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಎಸ್. ಎಂ. ಪಾಟೀಲ(ಗಣಿಹಾರ), ಐ. ಎಂ. ಇಂಡಿಕರ, ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ, ಶಬ್ಬೀರ ಜಾಗಿರದಾರ ಮುಂತಾದವರು ಮಾತನಾಡಿದರು.
ಈ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕಾಂತಾ ನಾಯಕ, ಉಪಾಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ, ಚಾಂದಸಾಬ ಗಡಗಲಾವ, ಮುಖಂಡರಾದ ಜಕ್ಕಪ್ಪ ಯಡವೆ, ಮಹ್ಮದರಫೀಕ ಟಪಾಲ ಎಂಜಿನಿಯರ್, ಬಿ. ಎಸ್. ಪಾಟೀಲ(ಯಾಳಗಿ), ರಾಕೇಶ ಕಲ್ಲೂರ, ಮಹಾದೇವಿ ಗೋಕಾಕ, ಆರತಿ ಶಹಾಪೂರ, ಸುರೇಶ ಹಾರಿವಾಳ, ರಫೀಕ ಪಕಾಲೆ, ಬಾಳನಗೌಡ ಪಾಟೀಲ, ವಸಂತ ಹೊನಮೊಡೆ, ಶರಣಪ್ಪ ಯಕ್ಕುಂಡಿ, ಹೊನಮಲ್ಲ ಸಾರವಾಡ, ಮೈಬೂಬ ಚೋರಗಸ್ತಿ, ಸಮದ ಸುತಾರ, ಬಲರಾಮ ನಾಯಕ, ಸಿದ್ದು ಗೌಡನವರ, ನಿಂಗಪ್ಪ ಸಂಗಾಪೂರ, ಜಯಶ್ರೀ ಭಾರತೆ, ವಿಜಯಕುಮಾರ ಘಾಟಗೆ, ಅಪ್ತಾಬ ಖಾದ್ರಿ ಇನಾಮದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅಂಗಘಟಕಗಳ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.