ಬಬಲೇಶ್ವರ ಮತಕ್ಷೇತ್ರಾದ್ಯಂತ ನಾನಾ ದೇವಸ್ಥಾನಗಳಲ್ಲಿ ಎಂಬಿಪಿ ಅಭಿಮಾನಿಗಳ ಬಳಗದಿಂದ ವಿಶೇಷ ಪೂಜೆ

ವಿಜಯಪುರ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಸರಕಾರದ ಸುತ್ತೋಲೆಯಂತೆ ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಲ್ಲಿ ರಾಮ- ಹನುಮಂತದೇವರ ಗುಡಿಗಳು ಹಾಗೂ ಗ್ರಾಮದೇವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ- ಪ್ರಾರ್ಥನೆ ನೆರವೇರಿಸಲಾಯಿತು.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಎಂಬಿಪಿ ಅಭಿಮಾನಿಗಳಿಂದ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಎಂಬಿಪಿ ಅಭಿಮಾನಿಗಳಿಂದ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತುಅದೇ ರೀತಿ ಶ್ರೀ ಎಂ. ಬಿ. ಪಾಟೀಲ ಅವರ ಅಭಿಮಾನಿಗಳ ಬಳಗದವರು ಕೂಡಾ ಬಬಲೇಶ್ವರ ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ರಾಮ, ಹನುಮಂತ ಮತ್ತು ಗ್ರಾಮದೇವತೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಎಂಬಿಪಿ ಅಭಿಮಾನಿಗಳಿಂದ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು

ಬೆಳಿಗ್ಗೆ ತಮ್ಮೂರಿನ ದೇವಸ್ಥಾನಗಳಿಗೆ ತೆರಳಿದ ಶ್ರೀ ಎಂ. ಬಿ. ಪಾಟೀಲ ಅವರ ಅಭಿಮಾನಿಗಳ ಬಳಗದ ಕಾರ್ಯಕರ್ತರು ಪೂಜೆ ಸಲ್ಲಿಸಿದರು. ಅಲ್ಲದೇ, ದೇವರ ಮೂರ್ತಿಗಳಿಗೆ ನೈವೇದ್ಯ ಅರ್ಪಿಸಿ ನಮನ ಸಲ್ಲಿಸಿದರು. ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ ನೆಲಸಲಿ ಎಂದು ಪ್ರಾರ್ಥಿಸಿದರು. ಅಲ್ಲದೇ, ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ಹಂಚಿದರು. ಅಲ್ಲದೇ, ಶ್ರೀರಾಮನ ಪರ ಜಯಘೋಷ ಹಾಕಿದರು.

Leave a Reply

ಹೊಸ ಪೋಸ್ಟ್‌