ಶಾಸಕ ಸಿ. ಎಸ್. ನಾಡಗೌಡ ಸೇರಿ 35 ಜನರಿಗೆ ನಿಗಮ, ಮಂಡಳಿ ಅಧ್ಯಕ್ಷರಾಗಿ ನೇಮಕ- ಯಾರಿಗೆ ಯಾವ ನಿಗಮ, ಮಂಡಳಿ ಜವಾಬ್ದಾರಿ? ಇಲ್ಲಿದೆ ಮಾಹಿತಿ.

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ ಸೇರಿದಂತೆ 35 ಜನ ಶಾಸಕರಿಗೆ ನಾನಾ ನಿಗಮ ಮತ್ತು ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.  ಅಲ್ಲದೇ, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಎರಡು ವರ್ಷಗಳ ಅವಧಿಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಇದರಲ್ಲಿ ವಿಜಯಪುರ ಜಿಲ್ಲೆಗೆ ಕೇವಲ ಒಂದು ನಿಗಮಕ್ಕೆ ಮಾತ್ರ ಅಧ್ಯಕ್ಷ ಸ್ಥಾನ ನೀಡಲಾಗಿದ್ದರೆ, ಪಕ್ಕದ ಬಾಗಲಕೋಟೆ ಜಿಲ್ಲೆಯ ಮೂರು ಜನ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. […]

ಗಣರಾಜ್ಯೋತ್ಸವದ ವೇಳೆ ಗಾಳಿಯಲ್ಲಿ ಗುಂಡು- ಗ್ರಾ. ಪಂ. ಅಧ್ಯಕ್ಷೆಗೆ ಗಾಯ- ಆಸ್ಪತ್ರೆಯಲ್ಲಿ ಚೇತರಿಕೆ

ವಿಜಯಪುರ: ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ಅಚಾನಕ್ಕಾಗಿ ಹಾರಿದ ಗುಂಡು ಗ್ರಾ. ಪಂ. ಅಧ್ಯಕ್ಷೆಯ ಕಾಲಿಗೆ ತಾಗಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ. 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋಮವ್ವ ಹೊಸಮನಿ ಧ್ವಜಾರೋಹಣ ಮಾಡಿ ನಿಂತಿದ್ದರು.  ಆಗ ಕಾಲಿಗೆ ಏಕಾಏಗ ಏನೋ ಬಡಿದಂತಾಗಿ ಕೆಳಗೆ ಕುಳಿತಿದ್ದಾರೆ.  ನಂತರ ಪರಿಶೀಲಿಸಿದಾಗ ಗುಂಡು ತಗುಲಿರುವುದು ಪತ್ತೆಯಾಗಿದೆ. ಇದೀಗ ಗ್ರಾ. ಪಂ. ಅಧ್ಯಕ್ಷೆ ಸೋಮವ್ವ ಹೊಸಮನಿ […]

ಗಣರಾಜ್ಯೋತ್ಸವ: ಬಸವ ನಾಡಿನಲ್ಲಿ ಸಚಿವ ಎಂ. ಬಿ. ಪಾಟೀಲ ಧ್ವಜಾರೋಗಣ

ವಿಜಯಪುರ: ಗಣರಾಜ್ಯೋತ್ಸವದ ಅಂಗವಾಗಿ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಧ್ವಜಾರೋಹಣ ನೆರವೇರಿಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರಯ ನಂತರ ನಾನಾ ಪದಾತಿ ದಳಗಳನ್ನು ವೀಕ್ಷಿಸಿದರು‌ ಅಲ್ಲದೇ, ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.     ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ […]