ವಿಜಯಪುರ: ಬಂಜಾರಾ ಕಸೂತಿ ಕಲೆಯನ್ನು ಪ್ರೋತ್ಸಾಹಿಸಲು ಬಂಜಾರಾ ಕಸೂತಿ ಕಸೂತಿ ಸಂಸ್ಥೆ ಸ್ಥಾಪಿಸಿ ತರಬೇತಿ ಶಿಬಿರಗಳ ಆಯೋಜನೆ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ.ಪಾಟೀಲ ಹೇಳಿದರು.
ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮಹಿಳಾ ಸಬಲೀಕರಣ ಘಟಕ ಮತ್ತು ಬಂಜಾರಾ ಕಸೂತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಬಂಜಾರಾ ಕಸೂತಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ವಿಜಯಪುರದ ಸಾಂಸ್ಕøತಿಕ ವೆಶಿಷ್ಟ್ಯತೆಯ ಸಂಕೇತವಾಗಿರುವ ಬಂಜಾರಾ ಕಸೂತಿ ಗ್ರಾಮೀಣ ಕರಕುಶಲ ಕಲೆಗಳಲ್ಲಿ ಒಂದಾಗಿದೆ. ಈ ಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನುರಿತ ಕುಶಲಕರ್ಮಿಗಳಿಂದ ಉಚಿತ ತರಬೇತಿ ನೀಡಲಾಗುತ್ತಿದೆ. ಗ್ರಾಮೀಣ ಮಹಿಳೆಯರು ಇದರ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಭಿಯಾಗಬಹುದಾಗಿದೆ ಎಂದು ಹೇಳಿದರು.
ಡಾ. ಮುರಗೇಶ ಪಟ್ಟಣಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ಬಿ. ಎಸ್. ಬೆಳಗಲಿ ಅಧ್ಯಕ್ಷತೆ ವಹಿಸಿದ್ದರು. ಬಂಜಾರಾ ಕಸೂತಿ ಸಂಸ್ಥೆ ಸಹ-ಸಂಸ್ಥಾಪಕಿ ಸೀಮಾ ಕಿಶೋರ, ಉಪಪ್ರಾಚಾರ್ಯ ಪ್ರೊ. ಎಸ್.ಎ. ಪಾಟೀಲ, ಡಾ. ಭಾರತಿ ಮಠ, ಪ್ರೊ. ರಶ್ಮಿ ಪಾಟೀಲ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಅಲಿಷಾ ಮುಲ್ಲಾ ಉಪಸ್ಥಿತರಿದ್ದರು.
ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ 250 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರೊ. ವೀಣಾ ಮೋರೆ ಪರಿಚಯಿಸಿದರು. ಪ್ರೊ. ದಾನಮ್ಮ ನಿರೂಪಿಸಿದರು.