ವಿಜಯಪುರ: ರಾಜ್ಯದಲ್ಲಿ ನೂರು ರಾಮಮಂದಿರ ಪುನಶ್ಚೇಚೇತನ ಮಾಡುವ ಸರಕಾರದ ತೀರ್ಮಾಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮನ ಅಸ್ತಿತ್ವವನ್ನುಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ರಾಮಮಂದಿರ ಪುನಶ್ಚೇತನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಒಳ್ಳೆಯ ಕೆಲಸ ಮಾಡುತ್ತಿರುವವರಿಗೆ ನಾವು ಹಾರೈಸುತ್ತೇವೆ. ಭಗವಾನ್ ರಾಮನನ್ನು ಅವರು ಒಪ್ಪಿಕೊಂಡಿರುವುದು ತುಂಬಾ ಸಂತೋಷಕರ ಸಂಗತಿಯಾಗಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಜಿಲ್ಲೆಯ ಎಂ. ಕೆ. ಹುಬ್ಬಳ್ಳಿಯಲ್ಲಿ ಭಗವಾ ಧ್ವಜ ಗಲಾಟೆ ವಿಚಾರ
ಬೆಳಗಾವಿ ಜಿಲ್ಲೆಯ ಎಂ. ಕೆ. ಹುಬ್ಭಳ್ಳಿಯಲ್ಲಿ ಭಗವಾ ಧ್ವಜ ಗಲಾಟೆ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮಂಡ್ಯದಲ್ಲಿ ಭಗವಾ ಧ್ವಜ ಗಲಾಟೆ ವಿಚಾರ ಕಾಂಗ್ರೆಸ್ ಸರಕಾರದ ಪಿತೂರಿಯಾಗಿತ್ತು. ಹನುಮ ಧ್ವಜ ಹಾರಿಸಲು ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು ಧ್ವಜ ಸ್ತಂಭ ನಿರ್ಮಾಣ ಮಾಡಲಾಗಿತ್ತು. ಈ ಘಟನೆ ನಾವು ಭಾರತದಲ್ಲಿದ್ದೇವಾ ಅಥವಾ ಬೇರೆ ದೇಶದಲ್ಲಿದ್ದೇವೆ ಎಂಬ ಅನುಮಾನ ಉಂಟು ಮಾಡಿತ್ತು. ಅಲ್ಪಸಂಖ್ಯಾತರ ಓಲೈಕೆ ಕಾರಣದಿಂದ ಮತ್ತು ಅಧಿಕಾರದ ಮದದಿಂದ ಅವರು ಹೀಗೆ ಮಾಡಿದ್ದಾರೆ ಎಂದು ಅವರು ಹೇಳಿದರು.
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಧಾನ ಮಾಡುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಿಂದಿನಿಂದಲೂ ಈ ಕುರಿತು ಚರ್ಚೆ ನಡೆಯುತ್ತದೆ. ಎಲ್ಲದಕ್ಕೂ ಸಮಯ ಕೂಡಿ ಬರಬೇಕು. ಮುಂಬರುವ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
ನಾನು ಹಾಗೂ ಪ್ರೀತಂಗೌಡ ರಾಜಕೀಯ ಷಡ್ಯಂತ್ರಗಳಿಗೆ ಪಿತೂರಿಗೆ ಬಲಿಯಾದೆವು ಎಂಬ ಸಿಟಿ ರವಿ ಆರೋಪದ ಕುರಿತು ಕೇಳಲಾದ ಪ್ರಶ್ನೆಗೆ ಬಿ ವೈ. ವಿಜಯೇಂದ್ರ, ಯಾವುದೇ ಉತ್ತರ ನೀಡದೇ ಮೌನಕ್ಕೆ ಶರಣಾದರು.
ಎಐಸಿಸಿ ಅಧ್ಯಕ್ಷ ಖರ್ಗೆ ಬಿಜೆಪಿ ಸೇರ್ಪಡೆಯಾಗುತ್ತಾರೆಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಉಂಟಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪಿಎಂ ಆಗಬೇಕೆಂಬ ಮತದಾರರ ಆಶಯವಾಗಿದೆ. ಇದು ಎಲ್ಲೆಡೆ ವ್ಯಕ್ತವಾಗುತ್ತಿದೆ. ಮೊನ್ನೆ ಖರ್ಗೆ ಅವರ ಬಾಯಿಯಿಂದ ಕೂಡ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಬರುತ್ತವೆ ಎಂಬ ಮಾತು ಬಂದಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆಂಬ ಮಾತು ಖರ್ಗೆ ಅವರ ಬಾಯಿಂದ ಬಂದಿದೆ. ಸತ್ಯದ ಇದು ಎಲ್ಲರಿಗೂ ಆಗಿದೆ. ಅದೇ ರೀತಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಿಗೂ ಆಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಮರುಸೇರ್ಪಡೆಯಾವು ಪ್ರಶ್ನೆಗೆ ಅದಕ್ಕೆ ನೀವೇ ಉತ್ತರಿಸಬೇಕು ಎಂದು ಬಿ. ವೈ. ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ , ಚಿದಾನಂದ ಚಲವಾದಿಮುಂತಾದವರು ಉಪಸ್ಥಿತರಿದ್ದರು.