ಫೆ. 26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ- ನಿರುದ್ಯೋಗಿಗಳು ನೊಂದಾಯಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಹಾಗೂ 27 ರಂದು ರಾಜ್ಯ ಮಟ್ಟದ ಯುವ ಬೃಹತ್ ಉದ್ಯೋಗ ಮೇಳ-2024 ಅಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಭಾಗವಹಿಸಲು ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.

ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಗಳ ಸಭಾ ಭವನದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯಲ್ಲಿ, ಸದರಿ ಉದ್ಯೋಗ https://skillconnect.kaushalkar.com  ಪೋರ್ಟಲ್ ನಲ್ಲಿ ನೋಂದಣಿ ಮಾಡಿಸುವಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಉಪ ರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಿಗೆ ಅವರು ಸೂಚನೆ ನೀಡಿದರು.

ವಿಜಯಪುರ ಜಿಲ್ಲಾಕಾರಿ ಕಚೇರಿಯಲ್ಲಿ ಡಿಸಿ ಟಿ. ಭೂಬಾಲನ್ ಕೌಶಲ್ಯ ಮಿಷನ್ ಸಮಿತಿ ಸಭೆ ನಡೆಸಿದರು

ಜಿಲ್ಲೆಯ ನಿರುದ್ಯೋಗಿಗಳು ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ದೊರೆಯಲು ಅನುಕೂಲವಾಗುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಸ್ವಚ್ಛವಾಹಿನಿಯ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂಲಕ ಗ್ರಾಮಗಳಲ್ಲಿ ಉದ್ಯೊಗ ಮೇಳ ಕುರಿತು ವ್ಯಾಪಕ ಮಾಹಿತಿ ಒದಗಿಸಬೇಕು. ಉದ್ಯೋಗ ಮೇಳಕ್ಕೆ ಸಂಬAಧಿಸಿದAತೆ, ಜಿಂಗಲ್ ತಯಾರಿಸಿ, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರಚುರಪಡಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

 

ಡೇ-ನಲ್ಮ್ ಅಭಿಯಾನದ ಪಿ.ಎಂ. ಸ್ವ-ನಿಧಿ 1,2ಮತ್ತು 3ನೇ ಹಂತದಲ್ಲಿ ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ಪಡೆದು, ಸಾಲ ಮಂಜೂರಾತಿ ಹಾಗೂ ಬಿಡುಗಡೆ ಮಾಡಲು, ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯಡಿ 8 ಸಾಮಾಜಿಕ ಭದ್ರತಾ ಯೋಜನೆಯಡಿ  ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಭದ್ರತಾ ಯೋಜನೆಗಳನ್ನು ಅರ್ಹ ಸಂಬAಧಿಸಿದ ಇಲಾಖೆಗಳಿಗೆ ಅವರು ಸೂಚನೆ ನೀಡಿದರು.

ಸ್ವ-ಸಹಾಯ ಸಂಘ ರಚನೆ, ಪ್ರದೇಶ ಮಟ್ಟದ ಒಕ್ಕೂಟ, ಸ್ವಯಂ-ಉದ್ಯೋಗ- ವೈಯಕ್ತಿಕ, ಗುಂಪು, ಬ್ಯಾಂಕ್ ಲಿಂಕೇಜ್ ನಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸಬೇಕು. ಸ್ವ-ನಿಧಿ ಸೇ ಸಮೃದ್ಧಿ ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿಯ ವಿಶೇಷ ಕೇಂದ್ರೀಯ ನೇರವಿನಡಿ PM-AJAY (SCA to SCSP) ಕಾರ್ಯಕ್ರಮದಡಿ ಮತ್ತು ಡೇ-ನಲ್ಮ ಅಭಿಯಾನದಲ್ಲಿ ಬಿಡುಗಡೆಯಾದ ಅನುದಾನ ಶೇ 100 ರಷ್ಟು ವೆಚ್ಚ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

 

ಈ ಸಂದರ್ಭದಲ್ಲಿ ಉದ್ಯೋಗ ಮೇಳದ ಪೋಸ್ಟರ್ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ,ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ್, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಅಜೂರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್ ಮೆಕ್ಕಳಕಿ,ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈರಣ್ಣ ಆಶಾಪೂರ, ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌