ವಿಜಯಪುರ: ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು(ಬಿ), ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಶ್ ಕೇಶರ್ವಾಣಿ ಅವರು ಇಂಡಿ ತಾಲೂಕಿನ ನಿಂಬಾಳ ಕೆ. ಡಿ, ಕೊಳುರಗಿ, ಬಬಲಾದ, ಹೊರ್ತಿ ಹಾಗೂ ಚವಡಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.
ನಿಂಬಾಳ ಕೆ.ಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಬೋರ್‌ವೆಲ್ ಮರುಪೂರಣ ಘಟP,À ಕೊಳುರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಸಾಮಾಜಿಕ ಅರಣ್ಯ ಇಲಾಖೆಯಡಿ ನಿರ್ಮಿಸಿರುವ ನೆಡುತೋಪು ಕಾಮಗಾರಿಯನ್ನು ವೀಕ್ಷಣೆ ಮಾಡಿ ಗಿಡಗಳಿಗೆ ನೀರು ಪೂರೈಸುವ ವ್ಯವಸ್ಥೆ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಬಬಲಾದ ಗ್ರಾಮ ಪಂಚಾಯಿತಿ ಕಟ್ಟಡದ ಮಳೆ ನೀರು ಕೊಯ್ಲು ಘಟಕ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಚವಡಿಹಾಳ ಗ್ರಾಮಕ್ಕೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಪ್ರತಿ ಮನೆ-ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿ ವೀಕ್ಷಿಸಿದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುತ್ತಿರುವುದರ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬರಗಾಲ ಇರುವುದರಿಂದ ಮುಂಬರುವ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗÀದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ಹೊರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಡಿ ಅನುಷ್ಠಾನಗೊಂಡ ಅಬ್ಸರ್ವೇಶನ್ ಬೋರವೆಲ್‌ನ ನೀರಿನ ಅಂತರ್ಜಲ ಮಟ್ಟ ಪರೀಕ್ಷಿಸಿದರು. ಹೊರ್ತಿ ಗ್ರಾಮದ ರೈತರ ಜಮೀನಿನಲ್ಲಿ ದ್ರಾಕ್ಷಿ ಬೆಳೆ ಹಾಗೂ ಬೋರ್‌ವೆಲ್ ಕಾಮಗಾರಿ ಹಾಗೂ ಕೃಷಿ ಇಲಾಖೆಯಡಿ ನಿರ್ಮಿಸಲಾದ ಕಂದಕ ಬದು (ಟ್ರೆಂಚ್ ಕಂ ಬಂಡ್) ಕಾಮಗಾರಿ ತಂಡ ವೀಕ್ಷಣೆ ನಡೆಸಿತು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕ ಪವಾರ, ಇಂಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಾಬು ರಾಠೋಡ, ಜಿಲ್ಲಾ ಪಂಚಾಯತಿಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ, ಇಂಡಿ ತಾಲೂಕಿನ ಸಹಾಯಕ ನಿರ್ದೇಶಕ ಸಂಜಯ ಖಡಗೇಕರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎಸ್.ಆರ್ ರುದ್ರವಾಡಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಚ್. ಎಸ್. ಪಾಟೀಲ, ಕೊಳೂರಗಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ಬಬಲಾದ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿರಾದಾರ, ಚವಡಿಹಾಳ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ. ಜಿ. ಪಾರೆ, ತಾಂತ್ರಿಕ ಸಂಯೋಜಕ ಸಾಹಿಲ ಬನಸೋಡೆ, ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.