ವಿಜಯಪುರ ಬಸವೇಶ್ವರ ಚೌಕಿನಲ್ಲಿ ಟ್ಯಾಂಕರ್ ಪಲ್ಟಿ- ಚಾಲಕನಿಗೆ ಗಾಯ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವಾಹನ ಪಲ್ಟಿಯಾದ ಘಟನೆ ವಿಜಯಪುರ ನಗರದ ಬಸವೇಶ್ವರ ಚೌಕ್ ನಲ್ಲಿ ನಡೆದಿದೆ.

ನಸುಕಿನ ಜಾವ ಟ್ಯಾಂಕರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಜೆಡಿಎಸ್ ಕಚೇರಿ ಮತ್ತು ಜಯಶ್ರೀ ಟಾಕೀಸ್ ಪಕ್ಕದಲ್ಲಿ ಪಲ್ಟಿಯಾಗಿದೆ.  ಈ ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಅ ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ವಾಹನಗಳ ಸಂಚಾರ ಬಂದ್ ಆಗಿತ್ತು.

ವಿಜಯಪುರ ನಗರದ ಬಸವೇಶ್ವರ ಚೌಕ್ ಬಳಿ ಟ್ಯಾಂಕರ್ ವಾಹನ ಪಲ್ಟಿಯಾಗಿದೆ

ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರಿ ಪೊಲೀಸರು ಪಲ್ಟಿಯಾದ ಟ್ಯಾಂಕರ್ ವಾಹನವನ್ನು ಕ್ರೇನ್ ಸಹಾಯದಿಂದ ತೆರವು ಮಾಡಿ ವಾಹನಗಳ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

ವಿಜಯಪುರ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Leave a Reply

ಹೊಸ ಪೋಸ್ಟ್‌