ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗ ಸಹಯೋಗದಿಂದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು.

ನಮ್ಮ ಸರಕಾರಿ ಪಾಲಿಟೆಕ್ನಿಕ್ ಹಾಗೂ ಯುವ ರೆಡಕ್ರಾಸ್ ಘಟಕದಿಂದ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿ ನಡೆದ ಈ ಅರೋಗ್ಯ ತಪಾಸಣೆ ಶಿಬಿರವನ್ನು ಈ ಕಾರ್ಯಕ್ರಮವನ್ನು ಆರ್. ಸಿ. ಎಚ್ ಅಧಿಕಾರಿ ಡಾ. ಕೆ. ಡಿ. ಗುಂಡಬಾವಡಿ ಉದ್ಘಾಟಿಸಿದರು.

ಈ ಶಿಬಿರದಲ್ಲಿ ಆರ್. ಕೆ. ಎಸ್. ಕೆ ತಂಡದಿಂದ ಸಂಸ್ಥೆಯ 780 ವಿದ್ಯಾರ್ಥಿಗಳಿಗೆ ಎಚ್. ಬಿ ತಪಾಸಣೆ ನಡೆಸಲಾಯಿತು.  34 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.  780 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕಾರ್ಯಕ್ರಮದಲ್ಲಿ ಆಯುಷ್ಮಾನ ಭಾರತ ಕಾರ್ಡ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಚಾರ್ಯ ಬಸವರಾಜ ಪಾಟೀಲ, ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ, ರಕ್ತ ಕೇಂದ್ರ ವೈದ್ಯಾಧಿಕಾರಿ ಡಾ. ಸುಮಾ ಮಮದಾಪುರ, ಆರ್. ಕೆ. ಎಸ್. ಕೆ ಜಿಲ್ಲಾ ಸಂಯೋಜಕಿ ಸಾವಿತ್ರಿ ಹಿಪ್ಪರಗಿ, ಡಾ. ಮಂಜುನಾಥ ಪೋಳ, ಯುವರೆಡ್ ಕ್ರಾಸ್ ಸಂಸ್ಥೆಯ ಘಟಕದ ಕಾರ್ಯಕ್ರಮ ಅಧಿಕಾರಿ ಸಂತೋಷ ರಾಠೋಡ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌