ಸಮಾಜ ಕಲ್ಯಾಣ ಇಲಾಖೆ, ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಬರಹದ ಶಬ್ದಗಳು ಬದಲು- ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ

ವಿಜಯಪುರ: ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂದು ರಾಷ್ಟ್ರಕವಿ ಕುವೆಂಪು ಅವರು ಮಕ್ಕಳಿಗೆ ಶಾಲೆಗಳ ಬಗ್ಗೆ ಧನ್ಯತಾ ಭಾವ ಬರಲಿ ಎಂದು ಕವನ ರಚಿಸಿದ್ದಾರೆ.  ಬಹುತೇಕ ಶಾಲೆಗಳಲ್ಲಿ ಪ್ರವೇಶ ದ್ವಾರಗಳಲ್ಲಿಯೇ ಈ ಸಾಲುಗಳು ರಾರಾಜಿಸುತ್ತವೆ.  ಅಷ್ಟೇ ಅಲ್ಲ, ಮಕ್ಕಳಲ್ಲಿ ಶಾಲೆ ಮತ್ತು ಅಲ್ಲಿ ವಿದ್ಯೆ ಬೋಧಿಸುವ ಶಿಕ್ಷಕರ ಬಗ್ಗೆ ಗೌರವ ಭಾವನೆಗಳನ್ನು ಹೆಚ್ಚಿಸುತ್ತವೆ.

ಆದರೆ, ಸಮಾಜ ಕಲ್ಯಾಣ ಇಲಾಖೆ ಮತ್ತು ವಸತಿ ಶಾಲೆಗಳ ಪ್ರವೇಶ ದ್ವಾರದ ಮೇಲೆ ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವ ಸಾಲುಗಳನ್ನು ಬರೆಯಲಾಗಿದೆ.

ವಿಜಯಪುರ ‌ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿಯೂ ಈ ರೀತಿಯ ಬರಹ ಬರೆಯಲಾಗಿದ್ದು, ಇದನ್ನು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ ಸಮರ್ಥಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಫಾಳಪೂಜೆ ಶಾಲೆಯಲ್ಲಿಯೂ ಬರೆಯಲಾಗಿರುವ ಬರಹ

ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ದೈರ್ಯವಾಗಿ‌ ಪ್ರಶ್ನೆ ಮಾಡಲಿ ಎಂಬ ಉದ್ದೇಶದಿಂದ ಈ ರೀತಿ ಬರಹ ಬದಲಾವಣೆ ಮಾಡಲಾಗಿದೆ.  ಸರಕಾರದ ಸುತ್ತೋಲೆ ಪ್ರಕಾರ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂದು ಬರಹ ಬದಲಾವಣೆ ಮಾಡಲಾಗಿದೆ.  ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೋಷಕರು ದೈರ್ಯವಾಗಿ ಪ್ರಶ್ನೆ ಮಾಡಲಿ.  ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ.  ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ ಪೋಷಕರು ದೈರ್ಯವಾಗಿ ಮಾತನಾಡಲಿ.  ದೈರ್ಯವಾಗಿ ಪ್ರಶ್ನೆ ಮಾಡಲಿ ಎಂಬ ಉದ್ದೇಶ ಇದರ ಹಿಂದಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮ ಸೇರಿದಂತೆ ಇತರೆಡೆ ಇರುವ  ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಬದಲಾಗಿರುವ ಬರಹ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Leave a Reply

ಹೊಸ ಪೋಸ್ಟ್‌