ಬೆಂಗಳೂರು: ರಾಜ್ಯ ಸರಕಾರ ಮತ್ತು ತೋಟಗಾರಿಕೆ ಇಲಾಖೆ ಇಂಡಿಯಲ್ಲಿರುವ ಲಿಂಬೆ ಅಭಿವೃದ್ಧಿ ಮಂಡಳಿಗೆ ರೂ. 7.50 ಕೋ. ಅನುದಾನ ನೀಡಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ರೂ. 30 ಲಕ್ಷ ಬಿಡುಗಡೆ ಮಾಡಲಾಗಿದೆ. ಅಲ್ಲದೇ, ಕೋಲ್ಡ್ ಸ್ಟೋರೇಜ್, ಮಾರ್ಕೆಟಿಂಗ್ ಯಾರ್ಡ್ ಮತ್ತು ಲಿಂಬೆ ಸಂಗ್ರಹಣ ಕಟ್ಟಡಳಿಗಾಗಿ ರೂ. 7.50 ಕೋ. ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿಯ ಪ್ರಧಾನ ಕಾರ್ಯದರ್ಶಿ ರಾಹುಲ ಬಾವಿದೊಡ್ಡಿ, ಇಂಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಚ್. ಎಸ್. ಪಾಟೀಲ, ಆನಂದ ಬಿರಾದಾರ ಮತ್ತೀತರರು ಉಪಸ್ಥಿತರಿದ್ದರು.