ವಿಜಯಪುರ: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಫೆ. 24 ರಂದು ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೊಳ ತಿಳಿಸಿದ್ದಾರೆ.
ಹೊರ್ತಿಯಲ್ಲಿ ಪೋಸ್ಟ್ ಆಫೀಸ್ ಹತ್ತಿರ ಹೊಸ ಕಾಂಪ್ಲೆಕ್ಸ್ ನಲ್ಲಿರುವ ಪಿಕೆಪಿಎಸ್ ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟಯೆ ವರೆಗೆ ಈ ಶಿಬಿರ ನಡೆಯಲಿದೆ. ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ಹೊರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಮತ್ತು ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಹೃದಯ ಶಾಸ್ತ್ರ, ಮೂತ್ರ ಜನಕಾಂಗ ಶಾಸ್ತ್ರ ಮತ್ತು ನರರೋಗ ಶಾಸ್ತ್ರ ವಿಭಾಗಗಳ ನುರಿತ ತಜ್ಞ ವೈದ್ಯರು ಸಕ್ಕರೆ ಕಾಯಿಲೆ, ಇಸಿಜಿ, ರಕ್ತದೊತ್ತಡ, ನಾಡಿಮಿಡಿತ, ದೇಹದ ತೂಕ ಉಚಿತವಾಗಿ ತಪಾಸಣೆ ನಡೆಸಲಿದ್ದಾರೆ.
ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಮೊಬೈಲ್ ಸಂಖ್ಯೆ 8951178777 ಮತ್ತು 6366786004 ಸಂಪರ್ಕಿಸಬಹುದಾಗಿದೆ ಎಂದು ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.