ಎಸ್.ಯು.ಸಿಐ ಕಮ್ಯೂನಿಷ್ಟ್ ಪಕ್ಷದ ಕಾರ್ಯಕರ್ತರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಎಸ್.ಯು.ಸಿ.ಐ ಕಮ್ಯೂನಿಷ್ಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಿಜಯಪುರ ನಗರದಲ್ಲಿ ಸಿಟಿ ಬಸ್ಸುಗಳ ಮತ್ತು ಜಿಲ್ಲೆಯಲ್ಲಿ ಸಾಮಾನ್ಯ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಬೇಕು.  ನವಭಾಗ ಮುಖ್ಯ ರಸ್ತೆ ಸೇರಿದಂತೆ ನಗರದಲ್ಲಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು.  ಸಂಕಷ್ಟದಲ್ಲಿರುವ ಎಲ್ಲಾ ರೈತರಿಗೆ ಬರ ಪರಿಹಾರ ಒದಗಿಸಬೇಕು.  ಜಿಲ್ಲೆಯಲ್ಲಿ ಸರಕಾರಿ ಎಂಜಿನೀಯರಿಂಗ್ ಮತ್ತು ಮೆಡಿಕಲ್ ಕಾಲೇಜ್‌ಗಳನ್ನು ಪ್ರಾರಂಭಿಸಬೇಕು.  ಸರಕಾರಿ ಆಸ್ಪತ್ರೆ ಖಾಸಗೀಕರಣ ಮಾಡುವುದನ್ನು ಕೈ ಬಿಡಬೇಕು.  ಜಿಲ್ಲಾ ಕ್ರೀಡಾಂಗಣವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿ […]

ವ್ಯಾನಿಟಿ ಬ್ಯಾಗ್ ಗಳಿಗೆ ಕನ್ನ ಹಾಕುತ್ತಿದ್ದ ಮೂರು ಜನ ಕಳ್ಳಿಯರ ಬಂಧಿಸಿದ ಗಾಂಧಿಚೌಕ್ ಪೊಲೀಸರು- ಚಿನ್ನಾಭರಣ ವಶ

ವಿಜಯಪುರ: ನಗರ ಕೇಂದ್ರ ಮತ್ತು ಸೆಟಲೈಟ್ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ವ್ಯಾನಿಟಿ ಬ್ಯಾಗ್ ಗೆ ಕನ್ನ ಹಾಕಿ ಚಿನ್ನಾಭರಣ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಗಾಂಧಿಚೌಕ್ ಪೊಲೀಸರು ಮೂರು ಜನ ಅಂತರ್ ಜಿಲ್ಲಾ ಕಳ್ಳಿಯರನ್ನು ಬಂಧಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಎಸ್ಪಿ ಋಷಿಕೇಶ ಸೋನಾವಣೆ, ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸುಗಳನ್ನು ಹತ್ತುವಾಗ ಅವರ ವ್ಯಾನಿಟಿ ಬ್ಯಾಗಗಳಲ್ಲಿನ ಚಿನ್ನಾಭರಣ ಕಳ್ಳತನವಾದ ಕುರಿತು ಐದು ಪ್ರಕರಣಗಳು ದಾಖಲಾಗಿದ್ದವು.  ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, […]

ದ್ವಿತೀಯ ಪಿಯು ಪರೀಕ್ಷೆ: ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ

ವಿಜಯಪುರ: ಜಿಲ್ಲಾದ್ಯಂತ ಮಾರ್ಚ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 59 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.  ಒಟ್ಟು 31,921 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಪರೀಕ್ಷೆ ನಡೆಯುವ ದಿನಗಳಂದು ಜಿಲ್ಲಾ ಭದ್ರತಾ ಕೊಠಡಿಯಿಂದ ಗೌಪ್ಯ […]

ಮಹಿಳಾ ವಿವಿ ಸ್ಕೌಟ್ಸ್, ಗೌಡ್ಸ್ ವಿದ್ಯಾರ್ಥಿನಿಯರಿಗೆ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ

ವಿಜಯಪುರ: ರಾಜ್ಯ ಅಕ್ಕಮiಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚವ್ಹಾಣ, ಭವಾನಿ ಅಂಗಡಿ, ವಿದ್ಯಾಶ್ರೀ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ವರ್ಷದ ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ನೀಡಿಲಾಗಿದೆ.  ಈ ಪುರಸ್ಕಾರ ಪಡೆದ ವಿದ್ಯಾರ್ಥಿನಿಯರಿಗೆ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಸಂಯೋಜಕ ಡಾ. ಶ್ರೀನಿವಾಸ ಮತ್ತಿತರರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.