ಎಸ್.ಯು.ಸಿಐ ಕಮ್ಯೂನಿಷ್ಟ್ ಪಕ್ಷದ ಕಾರ್ಯಕರ್ತರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಎಸ್.ಯು.ಸಿ.ಐ ಕಮ್ಯೂನಿಷ್ಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿಜಯಪುರ ನಗರದಲ್ಲಿ ಸಿಟಿ ಬಸ್ಸುಗಳ ಮತ್ತು ಜಿಲ್ಲೆಯಲ್ಲಿ ಸಾಮಾನ್ಯ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಬೇಕು.  ನವಭಾಗ ಮುಖ್ಯ ರಸ್ತೆ ಸೇರಿದಂತೆ ನಗರದಲ್ಲಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು.  ಸಂಕಷ್ಟದಲ್ಲಿರುವ ಎಲ್ಲಾ ರೈತರಿಗೆ ಬರ ಪರಿಹಾರ ಒದಗಿಸಬೇಕು.  ಜಿಲ್ಲೆಯಲ್ಲಿ ಸರಕಾರಿ ಎಂಜಿನೀಯರಿಂಗ್ ಮತ್ತು ಮೆಡಿಕಲ್ ಕಾಲೇಜ್‌ಗಳನ್ನು ಪ್ರಾರಂಭಿಸಬೇಕು.  ಸರಕಾರಿ ಆಸ್ಪತ್ರೆ ಖಾಸಗೀಕರಣ ಮಾಡುವುದನ್ನು ಕೈ ಬಿಡಬೇಕು.  ಜಿಲ್ಲಾ ಕ್ರೀಡಾಂಗಣವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿ ಜಿಲ್ಲೆಯಲ್ಲಿನ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಶ್ರಮಾಧಾರಿತ ಕೈಗಾರಿಕೆಗಳನ್ನು ಪ್ರಾರಂಭಿಸಬೇಕು, ಅಪೂರ್ಣವಾಗಿರುವ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಬೇಕು.  ವಿಜಯಪುರದಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ವಿಜಯಪುರಕ್ಕೆ ಸಂಚರಿಸುವ ರೈಲಿನ ಸಮಯವನ್ನು ರಾತ್ರಿ 8ಕ್ಕೆ ಹೊರಟು ಬೆಳಗ್ಗೆ 7 ರೊಳಗೆ ತಲುಪಬೇಕು.  ಗೊಲಗುಂಬಜ್ ಎಕ್ಷಪ್ರೆಸ್ ರೈಲಿನಲ್ಲಿ ವಿಜಯಪುರ ಜಿಲ್ಲೆಗೆ ಕಾದಿಟ್ಟಿರುವ ಆಸನಗಳ ಸಂಖ್ಯೆಯನ್ನು ಹೆಚ್ಚಿಸಬೇಕು.  ಮಕ್ಕಳಿಗೆ ಆಟವಾಡಲು ಮತ್ತು ಯುವಕರು ಹಾಗೂ ಹಿರಿಯಲು ವ್ಯಾಯಾಮ ಮಾಡಲು ಪಾರ್ಕುಗಳಲ್ಲಿ ಸುಸಜ್ಜಿತವಾದ ಸಲಕರಣೆಗಳನ್ನು ಒದಗಿಸಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಮವಿ ಪತ್ರ ಸಲ್ಲಿಸಿದರು.

ವಿಜಯಪುರದಲ್ಲಿ ಎಸ್.ಯು.ಸಿ.ಐ ಕಾರ್ಯಕರ್ತರು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು

 

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಯು.ಸಿ.ಐ ಕಮ್ಯೂನಿಷ್ಟ ಪಕ್ಷದ ಕಾರ್ಯದರ್ಶಿ ಬಿ. ಭಗವಾನರೆಡ್ಡಿ, ಜಿಲ್ಲೆಯಲ್ಲಿ ಆಯ್ಕೆಯಾದ ಎಲ್ಲಾ ಜನಪ್ರತಿನಿಧಿಗಳು ಜಿಲ್ಲೆಯ ಗಂಭೀರ ಸಮಸ್ಯೆಗಳಿಗೆ ಕೇವಲ ಮೊಸಳೆ ಕಣ್ಣೀರು ಹಾಕಿದ್ದಾರೆ ಹೊರತು ಈ ಸಮಸ್ಯೆಗನ್ನು ಪರಿಹರಿಸಲು ಪ್ರಯತ್ನ ಮಾಡಿಲ್ಲ.  ರಾಜಕಾರಣಿಗಳಿಗೆ ಚುನಾವಣೆ ಬಂದಾಗ ಮಾತ್ರ ಜನಗಳ ನೆನಪಾಗುತ್ತದೆ.  ಉಳಿದ ಸಂದರ್ಭದಲ್ಲಿ ಇವರ ನೆನಪಾಗುವುದಿಲ್ಲ ಎಂದು ಎಂದು ಆರೋಪಿಸಿದರು.

ಸ್ಲಂ ಅಭಿವೃದ್ದಿ ಸಮಿತಿಯ ಮುಖಂಡ ಅಕ್ರಮ ಮಾಶಾಳಕರ ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕೆಯೊಂದನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಎಸ್.ಯು.ಸಿ.ಐ ಮುಖಂಡ ಮಲ್ಲಿಕಾರ್ಜುನ ಎಚ್. ಟಿ. ಸಿದ್ದಲಿಂಗ ಬಾಗೇವಾಡಿ, ಶಿವಬಾಳಮ್ಮಕೊಂಡಗೂಳಿ, ಮಾದಪ್ಪಾ ಶಿವಣಗಿ, ಶಿವರಂಜಿನಿ ಎಸ್. ಬಿ., ನಿವೃತ್ತ ಪ್ರಾಂಶುಪಾಲ ವಿ. ಎ. ಪಾಟೀಲ, ಅನು ಸೋಧಿ, ಸುಮಿತ್ರಾ ಮಣೂರ, ಗಂಗಾಬಾಯಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌