ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನಾ ಧರಣಿ
ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು. ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಬೇಕು. ರೇವಣಸಿದ್ಧೇಶ್ವರ ಏತ ನೀರಾವರಿಯ ಯೋಜನೆಯ 2 ಮತ್ತು 3ನೇ ಹಂತದ ಕಾಮಗಾರಿ ಟೆಂಡರ್ ಕರೆಯಬೇಕು ಹಾಗೂ ಜಿಲ್ಲೆಯ ಶಾಶ್ವತ ನೀರಾವರಿಗಾಗಿ ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಗೆ ಎತ್ತರಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು. ಬರದಿಂದಾಗಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಲಿಂಬೆ, ಮಾವು, […]
ರಂಗೋಲಿ ಮೂಲಕ ರಾಷ್ಟ್ರೀಯ, ಅಂತಾರಾಷ್ಟೀಯ ದಾಖಲೆಗೆ ಸಿದ್ಧರಾದ ವೈದ್ಯಕೀಯ ವಿದ್ಯಾರ್ಥಿಗಳು- ವಿನೂನತ ಪ್ರಯತ್ನಕ್ಕೆ ಆಲ್ ದಿ ಬೆಸ್ಟ್
ವಿಜಯಪುರ: 1500 ವೈದ್ಯಕೀಯ ವಿದ್ಯಾರ್ಥಿಗಳು, 40 ಮಾರ್ಗದರ್ಶಕರು ಮತ್ತು 20 ಜನ ಮೇಲ್ವಿಚಾರಕರು, 50 ಸಾವಿರ ಚದುರ ಅಡಿ ಪ್ರದೇಶದಲ್ಲಿ ಚಿತ್ರ ಬಿಡಿಸಲು 10 ಟನ್ ರಂಗೋಲಿ ಖರೀದಿ. ಅರೇ, ಇದೇನಿದು ವಿಚಿತ್ರ ಎಂದು ನೀವು ಅಂದುಕೊಳ್ಳಬಹುದು. ಆದರೆ, ಇದೆಲ್ಲ ಮಾಡುತ್ತಿರುವುದು ಕೈಯ್ಯಲ್ಲಿ ಪುಸ್ತಕ ಹಿಡಿದು ಕಲಿಯುವಾಗಲೇ ಸ್ಟೆಥೋಸ್ಕೋಪ್ ಬಳಸಿ ರೋಗಿಗಳ ಆರೋಗ್ಯ ತಪಾಸಣೆ ನಡೆಸಬೇಕಾದ ವೈದ್ಯರು. ಅದೂ ಕೂಡ ಒಂದು ವಿನೂತನ ಕಾರ್ಯಕ್ರಮಕ್ಕಾಗಿ. ಇದು ಬಸವನಾಡು ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ […]