ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು.
ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಬೇಕು. ರೇವಣಸಿದ್ಧೇಶ್ವರ ಏತ ನೀರಾವರಿಯ ಯೋಜನೆಯ 2 ಮತ್ತು 3ನೇ ಹಂತದ ಕಾಮಗಾರಿ ಟೆಂಡರ್ ಕರೆಯಬೇಕು ಹಾಗೂ ಜಿಲ್ಲೆಯ ಶಾಶ್ವತ ನೀರಾವರಿಗಾಗಿ ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಗೆ ಎತ್ತರಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.
ಬರದಿಂದಾಗಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಲಿಂಬೆ, ಮಾವು, ತೆಂಗು ಒಣಗುತ್ತಿವೆ. ಕೂಡಲೇ ಸರಕಾರ ರೈತರ ನೆರವಿಗೆ ಧಾವಿಸಬೇಕು. ಟ್ರ್ಯಾಕ್ಟರ್ ಗಳಲ್ಲಿ ಅಶ್ಲೀಲ ಗೀತೆಗಳನ್ನು ಹಾಕಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತ ರೈತರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸ್ವಾಮೀಜಿಗಳು, ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಮ. ಪಾಟೀಲ, ಗುರುನಾಥ ಬಗಲಿ, ಭೀಮಸೇನ ಎಂ. ಕೋಕರೆ ಮುಂತಾದವರು ಉಪಸ್ಥಿತರಿದ್ದರು.