ವೈದ್ಯಕೀಯ ಲೋಕದಲ್ಲೋಂದು ವಿನೂತನ ಪ್ರಯತ್ನ- ಜಾಗತಿಕ ದಾಖಲೆಗಾಗಿ ರಂಗೋಲಿಯಲ್ಲಿ ಅರಳಿದ ಆರೋಗ್ಯದ ಪಠ್ಯಚಿತ್ರಗಳು

ವಿಜಯಪುರ, ಮಾ. 10: ರಂಗೋಲಿಯ ಮೂಲಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮತ್ತು ಜಗತ್ತಿನ ನಾನಾ ದಾಖಲೆ ಪುಟಗಳಲ್ಲಿ ಸೇರಿಸುವ ವಿಶ್ವದ ಮೊದಲ ವಿನೂತನ ಕಾರ್ಯಕ್ರಮಕ್ಕೆ ಬಸವ ನಾಡು ವಿಜಯಪುರದಲ್ಲಿ ನಡೆದಿದ್ದು, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಚಾಲನೆ ನೀಡಿದ್ದಾರೆ.

ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ 1500 ವಿದ್ಯಾರ್ಥಿಗಳು ಸ್ವಾಸ್ಷ್ಟ ಸಂತುಲನ ರಂಗೋಲಿ ಮಹೋತ್ಸವದಲ್ಲಿ ಪಾಲ್ಗೋಂಡು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಂಬAಧಿಸಿದ 250 ರಂಗೋಲಿ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು.  ತಲಾ ಐದಾರು ವೈದ್ಯಕೀಯ ವಿದ್ಯಾರ್ಥಿಗಳು ತಂಡದ ರೂಪದಲ್ಲಿ ತಮ್ಮ ವೈದ್ಯಕೀಯ ಪಠ್ಯಕ್ರಮಕ್ಕೆ ಸಂಬAಧಿಸಿದ ರಂಗೋಲಿ ಚಿತ್ರಗಳನ್ನು ಬಿಡಿಸಿದರು.  ಬಿ.ಎಲ್.ಡಿ.ಇ ವಿವಿಯ 24 ವಿಭಾಗಗಳ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿಕ್ಷಕರು, 40 ಜನ ಮಾರ್ಗದರ್ಶಕರು ಮತ್ತು 20 ಜನ ಮೇಲ್ವಿಚಾರಕರು ಬನ್ನೆಲುಬಾಗಿ ನಿಂತಿದ್ದರು.  ಒಟ್ಟು 50 ಸಾವಿರ ಚದುರ ಅಡಿ ಪ್ರದೇಶದಲ್ಲಿ 10 ಟನ್ ರಂಗೋಲಿ ಬಳಕೆಯಾಗುತ್ತಿದೆ. 10 ಅಡಿ ಉದ್ದ, 12 ಅಡಿ ಅಗಲ ಅಳತೆಯ 250 ರಂಗೋಲಿ ಚಿತ್ರಗಳನ್ನು ಬಿಡಿಸಲಾಯಿತು.

ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಆವರಣದಲ್ಲಿ ನಡೆದ ಸ್ವಾಸ್ಥ್ಯ ಸಂತುಲನ ರಂಗೋಲಿ ಮಹೋತ್ಸವ ಚಿತ್ರಗಳನ್ನು ಸಚಿವ ಎಂ. ಬಿ. ಪಾಟೀಲ ಮತ್ತೀತರರು ವೀಕ್ಷಿ,ಸಿದರು.

ಮಾನವನ ಶರೀರ, ಅಂಗಾಗAಗಳು, ಕಾಯಿಲೆಗಳು, ಗುಣಲಕ್ಷಣಗಳು, ದುಶ್ಚಟಗಳ ಪರಿಣಾಮಗಳು, ಔಷಧೋಪಚಾರಗಳು, ಮುನ್ನೆಚ್ಚರಿಕೆ ಕ್ರಮಗಳು, ರೋಗಗಳ ನಿಯಂತ್ರಣ, ವ್ಯಾಯಾಮ, ಆಹಾರ ನಿಯಮತ ಸೇವನೆ, ಆರೋಗ್ಯದ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬಹುದಾದ ಪ್ರಾಥಮಿಕ ಚಿಕಿತ್ಸೆಗಳು, ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆಗಳು ಸೇರಿದಂತೆ ಮನೋಸ್ಥೈರ್ಯ ಹೆಚ್ಚಳ, ಸ್ವಚ್ಛ ಪರಿಸರ, ಪ್ರಕೃತಿಯ ಸಂರಕ್ಷಣೆ, ಧ್ಯಾನ ಹೀಗೆ ಹಲವಾರು ವಿಷಯಗಳನ್ನು ರಂಗೋಲಿಯ ಮೂಲಕ ಚಿತ್ರಿಸಲಾಗಿತ್ತು.

ಕೈಯ್ಯಲ್ಲಿ ಪೆನ್ನು, ಕತ್ತಿನಲ್ಲಿ ಸ್ಟೆಥೋಸ್ಕೋಪ್ ಹಾಕಿಕೊಂಡು ಪಾಠ ಕೇಳುತ್ತ, ಪಠ್ಯಕ್ರಮಕ್ಕೆ ಅನುಗುಣವಾಗಿ ಪುಸ್ತಕಗಳಲ್ಲಿ ಚಿತ್ರ ಬಿಡಿಸುತ್ತ ಸದಾ ಅಧ್ಯಯನದಲ್ಲಿ ವ್ಯಸ್ಥರಾಗುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದು ಮನೋಲ್ಲಾಸ ಹೆಚ್ಚಿಸುವ ಮತ್ತು ಜಗತ್ತಿನಲ್ಲಿಯೇ ವಿನೂನತ ದಾಖಲೆಗೆ ಸಾಕ್ಷಿಯಾಗುವ ಘಟನೆಯಲ್ಲಿ ತಾವೂ ಪಾಲುದಾರರು ಎಂಬ ಹೆಗ್ಗಳಿಕೆಗೆ ಸ್ಪೂರ್ತಿಯಾಯಿತು.

ಈ ಸ್ವಾಸ್ಷ್ಟ ಸಂತುಲನ ರಂಗೋಲಿ ಮಹೋತ್ಸವ ಗಿನ್ನೇಸ್ ಬುಕ್ ಆಫ್ ರೆಕಾರ್ಡ್ಸ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ರ್ ನಲ್ಲಿ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಾಗಿದ್ದು, ಈ ಎಲ್ಲ ದಾಖಲೆ ಸಂಸ್ಥೆಗಳ ಅಧಿಕಾರಿಗಳು ಆನಲೈನ್ ಮೂಲಕ ಪ್ರತಿಕ್ಷಣದ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.  ಕೆಲವು ದಾಖಲೆ ಏಜೆನ್ಸಿಗಳಿಗೆ ವಿವಿ ಕುಲಾಧಿಪತಿಯೂ ಆಗಿರುವ ಎಂ. ಬಿ. ಪಾಟೀಲ ವಿಡಿಯೋ ಕಾಲ್ ಮೂಲಕ ಕಾರ್ಯಕ್ರಮದ ಮಾಹಿತಿ ವಿನಿಮಯ ಮಾಡಿಕೊಂಡಿರು.  ಅಲ್ಲದೇ, ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಆವರಣದಲ್ಲಿ 1500 ವೈದ್ಯಕೀಯ ವಿದ್ಯಾರ್ಥಿಗಳು ಬಿಡಿಸಿರುವ ಎಲ್ಲ 250 ರಂಗೋಲಿ ಚಿತ್ರಗಳನ್ನು ವೀಕ್ಷಿ,ಸಿದ ಅವರು, ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ. ಬಿ. ಪಾಟೀಲ, ಸ್ವಾಸ್ಥ್ಯ ಸಂತುಲನ ರಂಗೋಲಿ ಮಹೋತ್ಸವ ನಾನಾ ಜಾಗತಿಕ ದಾಖಲೆಗಳಿಗೆ ಸೇರ್ಪಡೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೊಂದು ಐತಿಹಾಸಿಕ ದಿನವಾಗಿದೆ.  ಈ ಐತಿಹಾಸಿಕ ಘಟನೆಗೆ ನಾವzಲ್ಲರೂ ಕೂಡ ಸಾಕ್ಷಿಯಾಗುತ್ತಿದ್ದೇವೆ.  ಕಾಲೇಜಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿಕೊಂಡು ಸ್ವಾಸ್ಥ್ಯ ರಂಗೋಲಿ ಮಹೋತ್ಸವ ಮಾಡಿದ್ದಾರೆ.  ಮನುಷ್ಯರಲ್ಲಿ ಕಾಣಿಸಿಕೊಳ್ಳುವ ರೋಗಗಳು, ದೇಹದ ನಾನಾ ಭಾಗಗಳು, ಅವುಗಳ ಕಾರ್ಯ ನಿರ್ವಹಣೆ, ದುಷ್ಚಟಗಳು ಮತ್ತು ನಿರ್ಲಕ್ಷ್ಯದಿಂದ ಆರೋಗ್ಯದ ಮೇಲಾಗುವ ಪರಿಣಾಮ, ನಾವು ಅವುಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಂಗೋಲಿಯ ಚಿತ್ರಗಳ ಮೂಲಕ ಕೂಲಂಕಷವಾಗಿ ಅರ್ಥಪೂರ್ಣವಾಗಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.
ಆರೋಗ್ಯದ ಜೊತೆಗೆ ರಾಷ್ಟ್ರೀಯತೆ, ನಾಡಿನ ಪುಣ್ಯಪುರುಷರ ಚಿತ್ರಗಳನ್ನೂ ಸಹ ಬಿಡಿಸಿದ ಮತ್ತು ಇದಕ್ಕೆ ಪ್ರೋತ್ಸಾಹ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.  ಶುಭ ಹಾರೈಸುತ್ತೇನೆ.  ನಾನಾ ಜಾಗತಿಕ ದಾಖಲೆಗಳಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.  ಗಿನ್ನೇಸ್ ಬುಕ್ ಆಫ್ ರೆಕಾರ್ಡ್ಸ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ರ್ ಎಲ್ಲ ದಾಖಲೆಗಳಿಗೆ ಈ ಮಹೋತ್ಸವ ಸೇರುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಇದು ಇಡೀ ಪ್ರಪಂಚದಲ್ಲಿ ಪ್ರಪ್ರಥಮ ಪ್ರಯೋಗ ಇದಾಗಿದೆ.  ಇದರ ಬಗ್ಗೆ ಸಾಕಷ್ಟು ಪ್ರಶಂಸೆಗಳು ಬರುತ್ತಿವೆ.  ಕೇಂದ್ರ ಆರೋಗ್ಯ ಸಚಿವರಿಗೆ, ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಸೇರಿದಂತೆ ನಾನಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.  ಇದು ಬಹುದೊಡ್ಡ ಪ್ರಯತ್ನವಾಗಿದ್ದು, ಇದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೂ ಪ್ರೇರಣೆ ಸಿಗಲಿದೆ.  ಈ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಬೇಕು ಎನ್ನುವ ಗುರಿ ತಲುಪಲು ಸಾಧ್ಯವಾಗುತ್ತದೆ.  ಅಂತಿಮ ಫಲಿತಾಂಶ ಬಂದ ನಂತರ ಎಲ್ಲ ದಾಖಲೆಗಳಿಗೆ ಮಾನ್ಯತೆ ಸಿಗಲಿದೆ ಎಂದು ಎಂ. ಬಿ. ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಐಟಿ ವಿಭಾಗದ ಮುಖ್ಯಸ್ಥ ಡಾ. ದೀಪಕ ಕುಮಾರ ಚವ್ಹಾಣ, ಕಾರ್ಯಕ್ರಮ ಸಂಯೋಜಕಿ ಡಾ. ನಂದಿನಿ ಮುಚ್ಚಂಡಿ, ಡಾ. ರವಿ ಬಿರಾದಾರ, ಡಾ. ಉದಯಕುಮಾರ ನುಚ್ಚಿ, ಡಾ. ದಯಾನಂದ ಮುಂದಾತವರು ಉಪಸ್ಥಿತರಿದ್ದರು.

ಇದೇ ವೇಳೆ ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಸ್ವಾಸ್ಥ್ಯ ಸಂತುಲನ ರಂಗೋಲಿ ಮಹೋತ್ಸವವನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದ್ದು, ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.  ವಿಜಯಪುರ ಜಿಲ್ಲೆಯ ಸಾರ್ವಜನಿಕರು ಮತ್ತು ಶಾಲೆ- ಕಾಲೇಜುಗಳ ವಿದ್ಯಾರ್ಥಿಗಳೂ ಇದರ ಸದುಪಯೋಗ ಪಡೆದುಕೊಳ್ಳಬೇಕು.  ಅಲ್ಲದೇ, ಆರೋಗ್ಯ ಸಂಬಂಧಿತ ಮಾಹಿತಿಯನ್ನು ಪಡೆಯಬೇಕು ಎಂದು ಸಚಿವ ಎಂ. ಬಿ. ಪಾಟೀಲ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಐಟಿ ವಿಭಾಗದ ಮುಖ್ಯಸ್ಥ ಡಾ. ದೀಪಕ ಕುಮಾರ ಚವ್ಹಾಣ, ಕಾರ್ಯಕ್ರಮ ಸಂಯೋಜಕಿ ಡಾ. ನಂದಿನಿ ಮುಚ್ಚಂಡಿ, ಡಾ. ರವಿ ಬಿರಾದಾರ, ಡಾ. ಉದಯಕುಮಾರ ನುಚ್ಚಿ, ಡಾ. ದಯಾನಂದ ಮುಂದಾತವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌