7ನೇ ವೇತನ ಆಯೋಗದಿಙದ ಸಿಎಂ ಎಸ್. ಸಿದ್ಧರಾಮಯ್ಯ ಅವರಿಗೆ ವರದಿ ಸಲ್ಲಿಕೆ

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ ಅಧ್ಯಕ್ಷತೆಯ ರಾಜ್ಯದ 7ನೇ ವೇತನ ಆಯೋಗವು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು.

ಬೆಂಗಳೂರಿನಲ್ಲಿ ಸಿಎಂ ಎಸ್. ಸಿದ್ಧರಾಮಯ್ಯ ಅವರು 7ನೇ ವೇತನ ಆಯೋಗದಿಂದ ವರದಿ ಸ್ವೀಕರಿಸಿದರು.

 

ಆಯೋಗದ ಸದಸ್ಯರಾದ ಪಿ. ಬಿ. ರಾಮಮೂರ್ತಿ, ಶ್ರೀಕಾಂತ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಡಾ. ಕೆ.‌ ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ. ಸಿ. ಜಾಫರ, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

ವರದಿ ಸ್ವೀಕರಿಸಿದ ಬಳಿಕ ಸಿಎಂ ಎಸ್. ಸಿದ್ಧರಾಮಯ್ಯ ಅವರು ಆಯೋಗದ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Leave a Reply

ಹೊಸ ಪೋಸ್ಟ್‌