ಲೋಕಸಭೆ ಚುನಾವಣೆ- ಈ ಬಾರಿ 1919048 ಮತದಾರರು- 85 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 17159

ವಿಜಯಪುರ: ಕೇಂದ್ರ ಚುನಾವಣೆ ಆಯೋಗ ಲೋಕಸಭೆಗೆ ದಿನಾಂಕ ನಿಗದಿಯಾಗಿದ್ದು, ಮಾ. 16 ರಿಂಂದಲೇ ಚುನಾವಣೆ ನೀತಿ ಸಂಹಿತೆ ಆರಂಭವಾಗಿದೆ.  ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 19 ಲಕ್ಷ 19 ಸಾವಿರದ 48 ಜನ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜೂನ್ 6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸಲಾಗುವುದು.  ಏ. 19 ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದ್ದು, ಏ. 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.  ಏ. 22ರಂದು ನಾಮಪತ್ರ ಹಿಂಪಡೆಯಬಹುದಾಗಿದೆ.  ಮೆ. 7 ರಂದು ಮತದಾನ ನಡೆಯಲಿದ್ದು, ಚುನಾವಣೆ ಫಲಿತಾಂಶ ಜೂ. 4 ರಂದು ಮತಎಣಿಕೆ ನಡೆಯಲಿದೆ.

ಚುನಾವಣಾಧಿಕಾರಿಳ ನೇಮಕ

ಜಿಲ್ಲೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಲು. ಒಂಬತ್ತು ಜನ ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಿಸಲಾಗಿದೆ.  ಜಿಲ್ಲೆಯಲ್ಲಿ ಒಟ್ಟು 2085 ಮತಗಟ್ಟೆಗಳಿದ್ದು, 1919048 ಜನ ಮತದಾರರು ಇದ್ದಾರೆ.  ಇವರಲ್ಲಿ 981251 ಪುರುಷರು ಮತ್ತು 949885 ಮಹಿಳೆಯರು ಹಾಗೂ 206 ಇತರೆ ಮತದಾರರು ಇದ್ದಾರೆ.

ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಬೈಟ್:

 

ಇವರಲ್ಲಿ 17159 ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, 21569 ವಿಶೇಷ ಚೇತನ ಮತದಾರರಿದ್ದಾರೆ.  85 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ.  ಅಂಚೆ ಮತ ಪತ್ರ ವಿತರಿಸುವ ಕುರಿತಂತೆ ಭಾರತ ಚುನಾವಣೆ ಆಯೋಗವು ನೀಡುವ ನಿರ್ದೇಶನ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಚುನಾವಣೆ ಬಂದೋಬಸ್ತ್ ಗಾಗಿ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 27 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.  ಅವುಗಳಲ್ಲಿ 11 ಅಂತಾರಾಜ್ಯ ಚೆಕ್‌ಪೋಸ್ಟ್ ಗಳಾಗಿದ್ದು, 16 ಅಂತರ್ ಜಿಲ್ಲಾ ಚೆಕಪೋಸ್ಟ್ ಸ್ಥಾಪಿಸಲಾಗಿದೆ.  ಮುಕ್ತ ಮತ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಒಂಟು ಜನ ಡಿವೈಎಸ್ಪಿ, 26 ಸಿಪಿಐ, 90 ಪಿಎಸ್‌ಐ, 118 ಎಎಸ್‌ಐ, 1888 ಪಿಸಿ, 976 ಹೋಮ್‌ಗಾರ್ಡ ಸೇರಿ ಒಟ್ಟು 3106 ಸಿಬ್ಬಂದಿಗಳನ್ನು ನೇಮಕ ಮಾಡಲಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಮತ್ತು ವಿಧಾನಸಭೆ ಮತಕ್ಷೇತರವಾರು ದೂರು ನಿರ್ವಹಣಾ ಕೋಶವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಚುನಾವಣಾ ವಿಷಯದ ಕುರಿತು ದೂರು ಸಲ್ಲಿಸಲು ಜಿಲ್ಲಾ ನೋಡಲ್ ಅಧಿಕಾರಿ ಮೋಬೈಲ್ ಸಂಖ್ಯೆ 9945354447ಗೆ ಕರೆ ಮಾಡಿ ದೂರು ದಾಖಲಿಸಬಹುದು.  ಚುನಾವಣೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ಪಿ ಋಷಿಕೇಶ ಸೋನಾವಣೆ, ಜಿ. ಪಂ. ಸಿಇಓ ರಿಶಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌